ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.ಗಾಂಧಿಯವರು ಹಿಂದೂತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದರು.
ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ ಎಂದರು.
ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದು ಸ್ಮರಿಸಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದೆ ಪ್ರಿಯಾಂಕ ಗಾಂಧಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪ ಅಧ್ಯಕ್ಷ ಲಮಾಣಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…