Featured

ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ : ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24

ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ , ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ : ಮುಖ್ಯಮಂತ್ರಿ

ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.ಗಾಂಧಿಯವರು ಹಿಂದೂತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದರು.

ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ ಎಂದರು.

ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದು ಸ್ಮರಿಸಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದೆ ಪ್ರಿಯಾಂಕ ಗಾಂಧಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪ ಅಧ್ಯಕ್ಷ ಲಮಾಣಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

2 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

5 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

8 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

9 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

9 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

9 hours ago