Featured

ಅದಾನಿ ಫೌಂಡೇಶನ್‌ನಿಂದ ಪಡುಬಿದ್ರಿ ಗ್ರಾಪಂಗೆ ಕಸ ನಿರ್ವಹಣಾ ವಾಹನ ಹಸ್ತಾಂತರ – vishwanews24

ಅದಾನಿ ಫೌಂಡೇಶನ್‌ನಿಂದ ಪಡುಬಿದ್ರಿ ಗ್ರಾಪಂಗೆ ಕಸ ನಿರ್ವಹಣಾ ವಾಹನ ಹಸ್ತಾಂತರ

ಉಡುಪಿ : ಅದಾನಿ ಪವರ್ ಲಿಮಿಟೆಡ್ ಉಡುಪಿ, ಅದಾನಿ ಫೌಂಡೇಶನ್‌ನ ಸಹಯೋಗದಲ್ಲಿ ಸಿಎಸ್‌ಆರ್ ಕಾರ್ಯಕ್ರಮದ ಭಾಗವಾಗಿ ಸಮುದಾಯ ಮೂಲಸೌಕರ್ಯ ಅಭಿವೃದ್ಧಿ ಉಪಕ್ರಮದ ಅಡಿಯಲ್ಲಿ ಪಡುಬಿದ್ರಿ ಗ್ರಾಪಂಗೆ 14 ಲಕ್ಷ ರೂ. ವೆಚ್ಚದಲ್ಲಿ ವಿಶೇಷವಾಗಿ ವಿನ್ಯಾಸ ಗೊಳಿಸಿದ ಕಸದ ಸಂಗ್ರಹಣಾ ವಾಹನವನ್ನು ಹಸ್ತಾಂತರಿಸಲಾಯಿತು.

ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ಅನುಕೂಲವಾಗುವ ಹೈಡ್ರಾಲಿಕ್ ಡೆಕ್ ಹೊಂದಿರುವ ಈ ವಾಹನದ ಕೀಲಿ ಯನ್ನು ಅದಾನಿ ಗ್ರೂಪ್‌ನ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಪಡುಬಿದ್ರಿ ಗ್ರಾಪಂ ಅಧ್ಯಕ್ಷೆ ಶಶಿಕಲಾ ಅವರಿಗೆ ಗ್ರಾಪಂ ಕಚೇರಿ ಆವರಣದಲ್ಲಿ ಅಧಿಕೃತವಾಗಿ ಹಸ್ತಾಂತರಿಸಿದರು.

ಇದನ್ನೂ ಓದಿ .. 👇👇

ಬಳಿಕ ಮಾತನಾಡಿದ ಕಿಶೋರ್ ಆಳ್ವ, ಉಡುಪಿ ತಾಪ ವಿದ್ಯುತ್ ಸ್ಥಾವರದ ಸುತ್ತಮುತ್ತಲಿನ ಪಡುಬಿದ್ರೆ ಸಹಿತ ಏಳು ಗ್ರಾಪಂಗಳಿಗೆ ಸಮುದಾಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮಾತ್ರ ಮೀಸಲಾದ ವಿಶೇಷ ಸಿಎಸ್‌ಆರ್ ಅನುದಾನವನ್ನು ಅದಾನಿ ಗ್ರೂಪ್ ನೀಡಿರುವುದಾಗಿ ತಿಳಿಸಿದರು. ಜೊತೆಗೆ ಶಿಕ್ಷಣ, ಆರೋಗ್ಯ, ಗ್ರಾಮೀಣ ಕ್ರೀಡೆಗಳ ಉತ್ತೇಜನ, ಕಲೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿಯೂ ಆದಾನಿ ಸಂಸ್ಥೆಯ ಸಿಎಸ್‌ಆರ್ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ ಎಂದರು.

ಈವರೆಗೆ ಪಡುಬಿದ್ರಿ ಗ್ರಾಪಂ ವ್ಯಾಪ್ತಿಯಲ್ಲಿ ಸಮುದಾಯ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮಾತ್ರ ಅದಾನಿ ಫೌಂಡೇಶನ್ ವತಿಯಿಂದ 1.92 ಕೋಟಿ ರೂ. ಮೊತ್ತದ ಸಿಎಸ್‌ಆರ್ ಅನುದಾನವನ್ನು ವೆಚ್ಚ ಮಾಡಲಾ ಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ .. 👇👇

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ ಶೆಟ್ಟಿ, ಪಡುಬಿದ್ರಿ ಗ್ರಾಪಂ ಉಪಾಧ್ಯಕ್ಷ ಹೇಮಚಂದ್ರ ಹಾಗೂ ಸದಸ್ಯರಾದ ರವಿ ಶೆಟ್ಟಿ, ಜ್ಯೋತಿ ಮೆನನ್, ಸುನಂದಾ, ಮುಬೀನಾ, ಶೋಭಾ ಶೆಟ್ಟಿ, ಸಂದೇಶ್, ಅಶೋಕ್, ಹರೀಶ್ ಶೆಟ್ಟಿ, ನವೀನ್ ಶೆಟ್ಟಿ, ಸುಜಾತಾ ಆಚಾರ್ಯ, ಶಶಿ ಹಾಗೂ ನಿಯಾಝ್, ಅದಾನಿ ಪವರ್ ಲಿಮಿಟೆಡ್ ಉಡುಪಿ ತಾಪ ವಿದ್ಯುತ್ ಸ್ಥಾವರದ ಪರವಾಗಿ ಸಹಾಯಕ ಮಹಾಪ್ರಬಂಧಕ ರವಿ ಆರ್. ಜೇರೆ ಹಾಗೂ ಆದಾನಿ ಫೌಂಡೇಶನ್‌ನ ಅನುದೀಪ್ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago