ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ಜೋಡಿ ಚಂದನ್- ನಿವೇದಿತಾ -Vishwanews24

Featured, ರಾಜ್ಯ ನ್ಯೂಸ್, ಸಿನಿಮಾ

ಮೈಸೂರು: ರ‍್ಯಾಪರ್ ಚಂದನ್​ಶೆಟ್ಟಿ ಹಾಗೂ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು ಅಧಿಕೃತವಾಗಿ ನೆರವೇರಿದೆ. ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ನಿಶ್ಚಿತಾರ್ಥ ನಡೆಯಿತು.

ಈ ಶುಭಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್ ಅಧಿಕೃತವಾಗಿ ಹೇಳಿಕೊಂಡಿದ್ದರು. ಇದೀಗ ಚಂದನ್, ನಿವೇದಿತಾಗೆ ಮತ್ತೊಮ್ಮೆ ರಿಂಗ್ ತೊಡಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಯುವ ದಸರಾದಲ್ಲಿ ಚಂದನ್ ರಿಂಗ್ ತೊಡಿಸುವ ಮೂಲಕ ಮ ನಿವೇದನೆ ಮಾಡಿದ್ದರು.