ರಾಜ್ಯದಲ್ಲಿ ಗೋ ಹತ್ಯೆ ನಿಷೇಧಿಸುವ ಕಾನೂನು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರಗಳನ್ನು ತಡೆಗಟ್ಟುವ ಕಾನೂನು ತರುವ ಪ್ರಯತ್ನ ನಡೆಸುವುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಗೋಹತ್ಯೆ ಹೆಚ್ಚಾಗುತ್ತಿದ್ದು, ಗೋ ಹತ್ಯೆ ಸಂಪೂರ್ಣ ನಿಲ್ಲಬೇಕು. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಗೋ ಹತ್ಯೆ ನಿಷೇಧಕ್ಕೆ ಪ್ರಜಾಪ್ರಭುತ್ವದಡಿಯಲ್ಲಿ ಬಿಲ್ ಪಾಸ್ ಮಾಡಿದ್ದು, ಅಂದಿನ ರಾಜ್ಯಪಾಲರಾದ ಭಾರದ್ವಾಜ್ ರವರು ಇದಕ್ಕೆ ಅಡ್ಡಿಬಂದು ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು. ಇದರಿಂದಾಗಿ ಈ ಕಾನೂನು ಜಾರಿಗೆ ಅಡ್ಡಿಯುಂಟಾಯಿತು ಎಂದರು.
ದೇಶದ ಹಲವು ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಜಾರಿಯಲ್ಲಿದೆ. ಆ ರಾಜ್ಯಗಳಲ್ಲಿನ ಕಾನೂನುಗಳನ್ನು ತರಿಸಿಕೊಂಡು ತಜ್ಞರೊಂದಿಗೆ ಚರ್ಚಿಸಿ ರಾಜ್ಯದಲ್ಲೂ ಕಾನೂನು ಜಾರಿಗೆ ಪ್ರಯತ್ನ ಮಾಡಲಾಗುವುದು ಹಾಗೂ ರಾಜ್ಯದಲ್ಲಿ ಎಲ್ಲೆಲ್ಲಿ ಅಕ್ರಮ ಕಸಾಯಿಖಾನೆಗಳಿವೆಯೋ ಅವುಗಳಿಗೆ ಬೀಗ ಹಾಕಿಸಲಾಗುವುದು ಎಂದರು.
ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ತಡೆಗಟ್ಟಲು ಹಲವು ರಾಜ್ಯಗಳಲ್ಲಿ ಕಠಿಣ ಕಾನೂನು ಜಾರಿಯಲ್ಲಿದೆ. ಆ ರಾಜ್ಯಗಳಲ್ಲಿನ ಕಾನೂನುಗಳನ್ನು ತರಿಸಿಕೊಂಡು ರಾಜ್ಯದಲ್ಲೂ ಸಹ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡುತ್ತೇನೆ ಎಂದು ತಿಳಿಸಿದರು.
ಗೋ ಮೂತ್ರದ ಬಗ್ಗೆ ಗೊತ್ತೇ ಎಂಬ ನಟ ಪ್ರಕಾಶ್ ರೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ರಾಮಚಂದ್ರಾಪುರ ಮಠಕ್ಕೆ ಬಂದರೆ ಗೋ ಮೂತ್ರ, ಗೋವಿನ ಸಗಣಿಯ ಮಹತ್ವ ಏನೆಂಬುದರ ಕುರಿತು ತಿಳಿಸಿ ಹೇಳುವ ಕಾರ್ಯ ಮಾಡುತ್ತೇವೆ. ಅದು ಬಿಟ್ಟು ಭಂಡತನದ ಹೇಳಿಕೆಗಳಿಗೆ ಉತ್ತರಿಸುವ ಅಗತ್ಯವಿಲ್ಲ. ಜನರೇ ತೀರ್ಮಾನಿಸುತ್ತಾರೆ ಎಂದರು.
ಬಿಜೆಪಿ 72 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಟಿಕೆಟ್ ಸಿಗದವರು ಆತುರದ ನಿರ್ಧಾರ ಕೈಗೊಳ್ಳಬಾರದು. ಅತೃಪ್ತರೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈಗಾಗಲೇ ದೇಶದ 21 ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಹಾಗೂ ಮೈತ್ರಿಕೂಟ ಸರ್ಕಾರ ಅಧಿಕಾರದಲ್ಲಿದ್ದು, 22ನೇ ರಾಜ್ಯವಾಗಿ ಕರ್ನಾ ಟಕದಲ್ಲೂ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗುವುದಿಲ್ಲ ಎಂದು ಹೇಳಿದ್ದರು. ಸಿದ್ಧರಾಮಯ್ಯ ಆಗುತ್ತೆ ಅನ್ನುವುದು ಆಗುವುದಿಲ್ಲ. ಆಗುವುದಿಲ್ಲ ಎನ್ನುವುದು ಆಗುತ್ತದೆ. ಹಾಗಾಗಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…