Featured

ಅಧಿಕಾರ ಇರಲಿ, ಇಲ್ಲದೆ ಇರಲಿ, ಜನರ ಸೇವೆ ಪೂರ್ವಜನ್ಮದ ಪುಣ್ಯದ ಕೆಲಸ : ಕಿಟ್ ವಿತರಿಸಿದ ಶಾಸಕ ಮುನಿರತ್ನ – Vishwanews24

ಅಧಿಕಾರ ಇರಲಿ, ಇಲ್ಲದೆ ಇರಲಿ, ಜನರ ಸೇವೆ ಪೂರ್ವಜನ್ಮದ ಪುಣ್ಯದ ಕೆಲಸ : ಕಿಟ್ ವಿತರಿಸಿದ ಶಾಸಕ ಮುನಿರತ್ನ – Vishwanews24

ಬೆಂಗಳೂರು: ಕೊರೊನಾದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರ ನೆರವಿಗೆ ಮುಂದಾಗಿರುವ ಶಾಸಕ ಮುನಿರತ್ನ ಅವರು, ರಾಜರಾಜೇಶ್ವರಿ ನಗರದ ಎಲ್ಲಾ ವಾರ್ಡ್‍ನ ಜನರಿಗೆ ಉಚಿತ ದಿನಸಿ ಪದಾರ್ಥಗಳನ್ನು ಹಂಚುತ್ತಿದ್ದಾರೆ.

ಇಂದು ಕೊಟ್ಟಿಗೆಪಾಳ್ಯದಲ್ಲಿ ಜನರಿಗೆ ಉಚಿತ ದಿನಸಿ ಪದಾರ್ಥಗಳ ಹಂಚಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕರು, ತರಕಾರಿ ಹಾಗೂ ದಿನಸಿ ಪದಾರ್ಥಗಳನ್ನು ಒಳಗೊಂಡಿರುವ ಕಿಟ್‍ನ್ನು ನೂರಾರು ಜನರಿಗೆ ಹಂಚುವ ಮೂಲಕ ಕೊರೊನಾ ಕಷ್ಟಕಾಲದಲ್ಲಿ ಸಮಸ್ಯೆ ಎದುರಿಸುತ್ತಿರುವ ಜನರಿಗೆ ನೆರವಿನ ಹಸ್ತ ಚಾಚಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುನಿರತ್ನ ಅವರು, ಅಧಿಕಾರ ಶಾಶ್ವತವಲ್ಲ ಅಧಿಕಾರ ಇರಲಿ, ಇಲ್ಲದೆ ಇರಲಿ ಆ ಜನರ ಸೇವೆ ಮಾಡುವುದು ಪೂರ್ವಜನ್ಮದ ಪುಣ್ಯ ಆ ಕೆಲಸ ನಾನು ಮಾಡುತ್ತಿದ್ದೇನೆ. ಇಂತಹ ಕಷ್ಟ ಕಾಲದಲ್ಲಿ ಮತದಾರ ಬಂಧುಗಳಿಗೆ ಮೊದಲಿಗೆ ನೆನಪಿಗೆ ಬರುವುದು ರಾಜಕಾರಣಿಗಳು. ಆಯಾ ಕ್ಷೇತ್ರದಲ್ಲಿರುವ ಸಣ್ಣ ಮಟ್ಟಿನಿಂದ ಹಿಡಿದು ದೊಡ್ಡ ಮಟ್ಟದ ರಾಜಕಾರಣಿ ಅಂದರೆ ತಾಲೂಕು, ಜಿಲ್ಲೆ, ನಗರ ಪ್ರದೇಶದಲ್ಲಿರುವ ರಾಜಕಾರಣಿಗಳು ಅಥವಾ ಶಾಸಕರು, ಸಂಸದರು ಇರಬಹುದು. ಕಷ್ಟ ಎಂದು ಬಂದಾಗ ಸಾರ್ವಜನಿಕರು ಮೊದಲಿಗೆ ಅವರನ್ನು ನೆನಪಿಸಿಕೊಳ್ಳುತ್ತಾರೆ. ಆ ರಾಜಕಾರಣಿ ಆ ಸಂದರ್ಭದಲ್ಲಿ ಜನರಿಗೆ ನೆರವಿನ ಹಸ್ತ ಚಾಚಿಲ್ಲ ಅಂದರೆ ಅವರನ್ನು ದೇವರು ಕೂಡ ಮೆಚ್ಚುವುದಿಲ್ಲ ಎಂದರು.

ನನ್ನ ಕ್ಷೇತ್ರದಲ್ಲಿ ನನ್ನ ಮತದಾರರ ಸೇವೆ ಮಾಡುವಂತಹ ಭಾಗ್ಯ ಜನ ನನಗೆ ಕಲ್ಪಿಸಿಕೊಟ್ಟಿದ್ದಾರೆ. ಅವರ ಋಣದಲ್ಲಿ ನಾನು ಇದ್ದೇನೆ. ಅವರ ಋಣ ತೀರಿಸುವ ಕೆಲಸ ನಾನು ಮಾಡುತ್ತಾ ಇರುತ್ತೇನೆ. ಕೊರೊನಾ ಮೊದಲನೇ ಅಲೆಯಲ್ಲೂ ನಾನು ಸಹಾಯ ಮಾಡಿದ್ದೇನೆ. ಎರಡನೇ ಅಲೆಯಲ್ಲೂ ಮಾಡುತ್ತಿದ್ದೇನೆ. ಮೊದಲನೇ ಅಲೆಯ ಸಂದರ್ಭ ನಾನು ಶಾಸಕನಾಗದೆ ಇದ್ದರು ಜನರ ಸೇವೆ ಮಾಡಿದ್ದೇನೆ. ಇದೀಗ ಶಾಸಕನಾಗಿ ಕೂಡ ಜನರ ಸೇವೆ ಮುಂದಾಗಿದ್ದೇನೆ ಎಂದು ಅಭಿಪ್ರಾಯಪಟ್ಟರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

7 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

9 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

10 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

10 hours ago