ತಲಕಾವೇರಿ(ಕೊಡಗು): ಕೊಡಗು ಜಿಲ್ಲೆಯ ಜೀವನದಿ ಕಾವೇರಿ ಜನ್ಮಸ್ಥಳ ತಲಕಾವೇರಿಗೆ ಪತ್ನಿ ಹಾಗೂ ಸಂಪುಟದ ಕೆಲವು ಸಹೋದ್ಯೋಗಿಗಳ ಜೊತೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮೂಢನಂಬಿಕೆಯನ್ನು ತಳ್ಳಿಹಾಕಿದ್ದಾರೆ.
ತಲಕಾವೇರಿಗೆ ಮುಖ್ಯಮಂತ್ರಿ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆ ಇಲ್ಲಿ ಮೊದಲಿನಿಂದಲೂ ಇತ್ತು. ಈ ಬಗ್ಗೆ ಮಾಧ್ಯಮದವರು ಅವರನ್ನು ಪ್ರಶ್ನಿಸಿದಾಗ, ನಾನು ಇಂತಹ ಮೂಢನಂಬಿಕೆಗಳನ್ನು ನಂಬುವುದಿಲ್ಲ. ಅಧಿಕಾರ ನನಗೆ ದೇವರು ಕೊಟ್ಟಿದ್ದು, ದೇವರೇ ಕಾಪಾಡುತ್ತಾನೆ ಎಂದರು.
ಭಾಗಮಂಡಲ, ತ್ರಿವೇಣಿ ಸಂಗಮಕ್ಕೆ ಆಗಮಿಸಿ ಭಂಗಂಡೇಶ್ವರ ದೇವರಿಗೆ ಸೇವೆ ಸಲ್ಲಿಸಿ ನಂತರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮನಸ್ಸಿನಲ್ಲಿ ಸಂಕಲ್ಪ ಮಾಡಿಕೊಂಡರು.
ಅವರ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿ, ಸಚಿವರಾದ ಡಿ ಕೆ ಶಿವಕುಮಾರ್, ಸಾ.ರಾ. ಮಹೇಶ್ ಕೂಡ ಇದ್ದರು. ಕೊಡಗು ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಕಾವೇರಿ ನದಿಯ ನಾಲ್ಕು ಜಲಾಶಯಗಳು ಭರ್ತಿಯಾಗಿದ್ದು ಬಾಗಿನ ಸಲ್ಲಿಸಲು ಭಾಗಮಂಡಲ ಮತ್ತು ತಲಕಾವೇರಿಗೆ ಭೇಟಿ ನೀಡಿದರು.
ಚಾಮರಾಜನಗರಕ್ಕೆ ಕಾಲಿಟ್ಟರೆ ಮುಖ್ಯಮಂತ್ರಿಗಳ ಅಧಿಕಾರ ಹೋಗುತ್ತದೆ ಎಂಬ ನಂಬಿಕೆಯಿದ್ದಂತೆ ತಲಕಾವೇರಿಗೆ ಭೇಟಿ ನೀಡಿದರೆ ಕೂಡ ಮುಖ್ಯಮಂತ್ರಿಗಳು ಶೀಘ್ರವೇ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ಹಿಂದಿನಿಂದಲೂ ಇದೆ.
ಈ ಸಂದರ್ಭದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ . ಧರ್ಮ ಮತ್ತು ಸುಭಿಕ್ಷೆಯಿಂದ ರಾಜ್ಯವನ್ನು ನಡೆಸುವ ಕಾರ್ಯವನ್ನು ಸರಕಾರ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ತಾಯಿಯ ಸನ್ನಿಧಾನಕ್ಕೆ ಬಂದು ಪೂಜೆ ಸಲ್ಲಿಸಲಾಗಿದೆ. .
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…