Featured

ಅಧಿಕಾರ ನನಗೆ ದೇವರು ಕೊಟ್ಟಿದ್ದು, ದೇವರೇ ಕಾಪಾಡುತ್ತಾನೆ : ತಲಕಾವೇರಿಯಲ್ಲಿ ಸಿಎಂ ಕುಮಾರಸ್ವಾಮಿ

ತಲಕಾವೇರಿ(ಕೊಡಗು): ಕೊಡಗು ಜಿಲ್ಲೆಯ ಜೀವನದಿ ಕಾವೇರಿ ಜನ್ಮಸ್ಥಳ ತಲಕಾವೇರಿಗೆ ಪತ್ನಿ ಹಾಗೂ ಸಂಪುಟದ ಕೆಲವು ಸಹೋದ್ಯೋಗಿಗಳ ಜೊತೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮೂಢನಂಬಿಕೆಯನ್ನು ತಳ್ಳಿಹಾಕಿದ್ದಾರೆ.

ತಲಕಾವೇರಿಗೆ ಮುಖ್ಯಮಂತ್ರಿ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆ ಇಲ್ಲಿ ಮೊದಲಿನಿಂದಲೂ ಇತ್ತು. ಈ ಬಗ್ಗೆ ಮಾಧ್ಯಮದವರು ಅವರನ್ನು ಪ್ರಶ್ನಿಸಿದಾಗ, ನಾನು ಇಂತಹ ಮೂಢನಂಬಿಕೆಗಳನ್ನು ನಂಬುವುದಿಲ್ಲ. ಅಧಿಕಾರ ನನಗೆ ದೇವರು ಕೊಟ್ಟಿದ್ದು, ದೇವರೇ ಕಾಪಾಡುತ್ತಾನೆ ಎಂದರು.

ಭಾಗಮಂಡಲ, ತ್ರಿವೇಣಿ ಸಂಗಮಕ್ಕೆ ಆಗಮಿಸಿ ಭಂಗಂಡೇಶ್ವರ ದೇವರಿಗೆ ಸೇವೆ ಸಲ್ಲಿಸಿ ನಂತರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮನಸ್ಸಿನಲ್ಲಿ ಸಂಕಲ್ಪ ಮಾಡಿಕೊಂಡರು.

ಅವರ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿ, ಸಚಿವರಾದ ಡಿ ಕೆ ಶಿವಕುಮಾರ್, ಸಾ.ರಾ. ಮಹೇಶ್ ಕೂಡ ಇದ್ದರು. ಕೊಡಗು ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಕಾವೇರಿ ನದಿಯ ನಾಲ್ಕು ಜಲಾಶಯಗಳು ಭರ್ತಿಯಾಗಿದ್ದು ಬಾಗಿನ ಸಲ್ಲಿಸಲು ಭಾಗಮಂಡಲ ಮತ್ತು ತಲಕಾವೇರಿಗೆ ಭೇಟಿ ನೀಡಿದರು.

ಚಾಮರಾಜನಗರಕ್ಕೆ ಕಾಲಿಟ್ಟರೆ ಮುಖ್ಯಮಂತ್ರಿಗಳ ಅಧಿಕಾರ ಹೋಗುತ್ತದೆ ಎಂಬ ನಂಬಿಕೆಯಿದ್ದಂತೆ ತಲಕಾವೇರಿಗೆ ಭೇಟಿ ನೀಡಿದರೆ ಕೂಡ ಮುಖ್ಯಮಂತ್ರಿಗಳು ಶೀಘ್ರವೇ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ಹಿಂದಿನಿಂದಲೂ ಇದೆ.

ಈ ಸಂದರ್ಭದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ . ಧರ್ಮ ಮತ್ತು ಸುಭಿಕ್ಷೆಯಿಂದ ರಾಜ್ಯವನ್ನು ನಡೆಸುವ ಕಾರ್ಯವನ್ನು ಸರಕಾರ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ತಾಯಿಯ ಸನ್ನಿಧಾನಕ್ಕೆ ಬಂದು ಪೂಜೆ ಸಲ್ಲಿಸಲಾಗಿದೆ. .

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago