Featured

ಅಧಿಕಾರ ಯಾರಿಗೂ ಶಾಶ್ವತವಲ್ಲ , ತಂದೆಯ ಇಚ್ಛೆಯಂತೆಯೇ ನಡೆಯುವೆ : ಯತೀಂದ್ರ ಸಿದ್ದರಾಮಯ್ಯ – vishwanews24

ಅಧಿಕಾರ ಯಾರಿಗೂ ಶಾಶ್ವತವಲ್ಲ , ತಂದೆಯ ಇಚ್ಛೆಯಂತೆಯೇ ನಡೆಯುವೆ : ಯತೀಂದ್ರ ಸಿದ್ದರಾಮಯ್ಯ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ ಪ್ರತಿಕ್ರಿಯೆ ನೀಡದೇ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದರು.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕವಲಗುಡ್ಡ ಗ್ರಾಮದಲ್ಲಿ ನಡೆದ ಖಾಸಗಿ ಶಾಲೆಯ ವಾರ್ಷಿಕೋತ್ಸವದಲ್ಲಿ ಭಾಗಿಯಾಗಿದ್ದ ಅವರು, ಸುದ್ದಿಗಾರರ ಪ್ರಶ್ನೆಗಳಿಗೆ ಅತೀ ಜಾಗರೂಕತೆಯಿಂದ ಉತ್ತರಿಸಿದರು. ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತೀಂದ್ರ, ಸಿಎಂ ಬದಲಾವಣೆ ಬಗ್ಗೆ ನಾನು ಈಗಾಗಲೇ ಹೇಳಿಕೆ ನೀಡಿದ್ದೇನೆ. ಅದರ ಬಗ್ಗೆ ಮತ್ತೊಮ್ಮೆ ನಾನು ಏನನ್ನೂ ಹೇಳಬೇಕಿಲ್ಲ. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಅಧಿಕಾರ ಯಾರಿಗೂ ಶಾಶ್ವತವಲ್ಲ ಹೀಗಾಗಿ ಈ ವಿಚಾರದಲ್ಲಿ ನಾನು ಹೆಚ್ಚಿಗೆ ಮಾತನಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ಚರ್ಚೆಗೆ ಪೂರ್ಣವಿರಾಮ ಇಡಲು ಪ್ರಯತ್ನಿಸಿದರು. ಈ ಹಿಂದೆ ‘ಐದು ವರ್ಷ ನಮ್ಮಪ್ಪನೇ ಸಿಎಂ’ ಎಂದು ಹೇಳಿಕೆ ನೀಡುವ ಮೂಲಕ ಯತೀಂದ್ರ ಅವರು ಪಕ್ಷದೊಳಗೆ ಆಂತರಿಕ ಸಂಘರ್ಷಕ್ಕೆ ಕಾರಣವಾಗಿದ್ದರು.

ಹಿಂದುಳಿದವರ, ದೀನ ದಲಿತರ, ಅಲ್ಪಸಂಖ್ಯಾತರ ಶ್ರೇಯಸ್ಸಿಗಾಗಿ ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗಲಿರುಳು ಶ್ರಮಿಸುತ್ತಿದ್ದು ಅವರ ಇಚ್ಛೆಯಂತೆ ತಾವು ಕೂಡಾ ನಡೆಯುವುದಾಗಿ, ಅಹಿಂದ ಜನರ ಪರವಾಗಿ ಶ್ರಮಿಸುವುದಾಗಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Vishwa News 24

Recent Posts

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

32 seconds ago

ಮಂಗಳೂರು: ವಿದೇಶಿ ಉದ್ಯೋಗದ ಆಮಿಷಕ್ಕೆ ವಂಚಕರ ಬಲೆಗೆ ಬೀಳದಂತೆ ಯುವಜನತೆಗೆ ಪೊಲೀಸ್‌ ಆಯುಕ್ತರ ಎಚ್ಚರಿಕೆ – vishwanews24

ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…

11 minutes ago

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ IT ಇಲಾಖೆ ಅಧಿಕಾರಿಗಳಿಂದ ದಾಳಿ – vishwanews24

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…

32 minutes ago

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಕೈತಪ್ಪುವ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ – vishwanews24

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …

1 hour ago

ಕುಂದಾಪುರ : ಹುಟ್ಟೂರಿಗೆ ತಲುಪಿದ ಅನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ – vishwanews24

ಕುಂದಾಪುರ: ಶಾರ್ಜಾದಲ್ಲಿ ನಿಗೂಢ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಹುಟ್ಟೂರಿಗೆ ಕುಂದಾಪುರ : ಶಾರ್ಜಾದಲ್ಲಿ ಜುಲೈನಲ್ಲಿ ನಿಗೂಢವಾಗಿ…

1 hour ago

ಏಷ್ಯನ್ ಗೇಮ್ಸ್ ನಲ್ಲಿ ಎರಡನೇ ಚಿನ್ನದ ಪದಕ ಗೆದ್ದುಕೊಂಡ ಭಾರತ – vishwanews24

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನ.. 10 ಮೀಟರ್ ಏರ್ ಪಿಸ್ತೂಲ್‌ ನಲ್ಲಿ ಸ್ವರ್ಣ ಪದಕ ಗೆದ್ದ ಕಮಲ್‌ಜೀತ್–ಸುರುಚಿ…

2 hours ago