Featured

ಅಧಿಕೃತವಾಗಿ ರಾಜಕೀಯಕ್ಕೆ ಕಾಲಿಟ್ಟ ಪ್ರಿಯಾಂಕಾ ಗಾಂಧಿ ;ಪ್ರಧಾನ ಕಾರ್ಯದರ್ಶಿಯಾಗಿ ನೇಮಕ – Vishwanews24

ನವದೆಹಲಿ: ಲೋಕಸಭೆ ಚುನಾವಣೆ ಘೊಷಣೆಯಾಗುವುದಕ್ಕೆ ಮುನ್ನ ಕಾಂಗ್ರೆಸ್ ಪಕ್ಷದ ವರಿಷ್ಠರು ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ತಾಳಿದ್ದಾರೆ. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮಗಳು ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ, ಪ್ರಿಯಾಂಕಾ ಗಾಂಧಿಯವರನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿಗೆ ಪೂರ್ವ ಉತ್ತರ ಪ್ರದೇಶದ ಜವಾಬ್ದಾರಿ ನೀಡಲಾಗಿದೆ. ಫೆಬ್ರವರಿ ಮೊದಲ ವಾರದಲ್ಲಿ ಪ್ರಿಯಾಂಕಾ ಗಾಂಧಿ ತಮ್ಮ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತರು, ಪ್ರಿಯಾಂಕಾ ಗಾಂಧಿಯವರನ್ನು ಒತ್ತಾಯ ಮಾಡುತ್ತ ಬಂದಿದ್ದರು. ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಮಾಡುವಂತೆ ಕಾರ್ಯಕರ್ತರು ಒತ್ತಡ ಹೇರಿದ್ದರು. ಈಗ ಅವ್ರ ಆಸೆ ಈಡೇರಿದೆ. ಈ ಹಿಂದೆ ಪ್ರಿಯಾಂಕಾ ಗಾಂಧಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಆದ್ರೆ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಮಾಡಿರಲಿಲ್ಲ.

ಕಾಂಗ್ರೆಸ್ ಈ ಬೆಳವಣಿಗೆ 2019 ರ ಲೋಕಸಭೆ ಚುನಾವಣೆ ಮೇಲೆ ಮಹತ್ವದ ಪ್ರಭಾವ ಬೀರಲಿದೆ. ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ಪಾತ್ರ ಬಹುಮುಖ್ಯ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜವಾದಿ ಪಕ್ಷ ಕಾಂಗ್ರೆಸ್ ಕೈ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಏಕಾಂಗಿ ಹೋರಾಟ ನಡೆಸುವ ಸಾಧ್ಯತೆಯಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago