ನವದೆಹಲಿ: ಲೋಕಸಭೆ ಚುನಾವಣೆ ಘೊಷಣೆಯಾಗುವುದಕ್ಕೆ ಮುನ್ನ ಕಾಂಗ್ರೆಸ್ ಪಕ್ಷದ ವರಿಷ್ಠರು ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ತಾಳಿದ್ದಾರೆ. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮಗಳು ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ, ಪ್ರಿಯಾಂಕಾ ಗಾಂಧಿಯವರನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿಗೆ ಪೂರ್ವ ಉತ್ತರ ಪ್ರದೇಶದ ಜವಾಬ್ದಾರಿ ನೀಡಲಾಗಿದೆ. ಫೆಬ್ರವರಿ ಮೊದಲ ವಾರದಲ್ಲಿ ಪ್ರಿಯಾಂಕಾ ಗಾಂಧಿ ತಮ್ಮ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತರು, ಪ್ರಿಯಾಂಕಾ ಗಾಂಧಿಯವರನ್ನು ಒತ್ತಾಯ ಮಾಡುತ್ತ ಬಂದಿದ್ದರು. ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಮಾಡುವಂತೆ ಕಾರ್ಯಕರ್ತರು ಒತ್ತಡ ಹೇರಿದ್ದರು. ಈಗ ಅವ್ರ ಆಸೆ ಈಡೇರಿದೆ. ಈ ಹಿಂದೆ ಪ್ರಿಯಾಂಕಾ ಗಾಂಧಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಆದ್ರೆ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಮಾಡಿರಲಿಲ್ಲ.
ಕಾಂಗ್ರೆಸ್ ಈ ಬೆಳವಣಿಗೆ 2019 ರ ಲೋಕಸಭೆ ಚುನಾವಣೆ ಮೇಲೆ ಮಹತ್ವದ ಪ್ರಭಾವ ಬೀರಲಿದೆ. ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ಪಾತ್ರ ಬಹುಮುಖ್ಯ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜವಾದಿ ಪಕ್ಷ ಕಾಂಗ್ರೆಸ್ ಕೈ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಏಕಾಂಗಿ ಹೋರಾಟ ನಡೆಸುವ ಸಾಧ್ಯತೆಯಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…