Featured

ಪ್ರಥಮ ಬಾರಿಗೆ ಅಧಿವೇಶನದಲ್ಲಿ ಪ್ರತಿಪಕ್ಷ ಸ್ಥಾನದಲ್ಲಿ 104 ಶಾಸಕರು : ಕರ್ನಾಟಕ ರಾಜಕೀಯದಲ್ಲಿ ಹೊಸ ದಾಖಲೆ ಬರೆದ ಬಿಎಸ್‍ವೈ ;!

ಬೆಂಗಳೂರು: ರಾಜ್ಯದ ಕಡಿಮೆ ಅವಧಿಯ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಾಖಲೆ ಬರೆದಿದ್ದರು. ಆದರೆ ಈಗ ಮತ್ತೊಂದು ದಾಖಲೆ ಅವರ ಹೆಸರಿಗೆ ಸೇರ್ಪಡೆಯಾಗಿದೆ.

ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಬಾರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ದಾಖಲೆಯನ್ನು ಸದ್ಯ ಬಿ.ಎಸ್.ಯಡಿಯೂರಪ್ಪ ಅವರು ತಮ್ಮದಾಗಿಸಿಕೊಂಡಿದ್ದಾರೆ. 11 ವರ್ಷಗಳ ಬಳಿಕ ವಿಪಕ್ಷ ನಾಯಕರಾಗಿರುವ ಯಡಿಯೂರಪ್ಪ ಅವರು, ಒಟ್ಟು ಮೂರು ಬಾರಿ ಈ ಸ್ಥಾನವನ್ನು ಏರಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ(1994 ಡಿಸೆಂಬರ್ 27 ನಿಂದ 1996 ಡಿಸೆಂಬರ್ 18) ಮೊದಲ ಬಾರಿ ವಿಪಕ್ಷ ನಾಯಕರಾಗಿದ್ದರು. ಮಾಜಿ ಸಿಎಂ ಧರ್ಮಸಿಂಗ್ ಮುಖ್ಯಮಂತ್ರಿ ಆಗಿದ್ದಾಗ (2004ರ ಜೂನ್ 10 ರಿಂದ, 2006 ಫೆಬ್ರವರಿ 3ರವರೆಗೆ) ಎರಡನೇ ಬಾರಿ ವಿಪಕ್ಷ ನಾಯಕರಾಗಿದ್ದರು. ಈಗ 2018ರ ಮೇ 25 ರಿಂದ ಮೂರನೇ ಬಾರಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ವಿಪಕ್ಷ ಸ್ಥಾನದಲ್ಲಿ 104 ಶಾಸಕರು ಕೂರುತ್ತಿದ್ದಾರೆ. ಹಾಗೇ 37 ಶಾಸಕರು ಆಡಳಿತ ನಡೆಸುತ್ತಿರುವುದು ಇತಿಹಾಸದಲ್ಲಿ ಇದೇ ಮೊದಲು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮೈತ್ರಿ ಸರ್ಕಾರದ ಚೊಚ್ಚಲ ಅಧಿವೇಶನದಲ್ಲಿ ಭಾಗಿ ಆಗುವ ಮುಂಚೆ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿಯವರು‌ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ. ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದಾರೆ. ಉತ್ತಮ‌ ಕೆಲಸಗಳಿಗೆ ಪ್ರತಿಪಕ್ಷವಾಗಿ ನಾವು ಸಹಕಾರ ನೀಡುತ್ತೇವೆ. ಬಜೆಟ್​ನಲ್ಲಿ ಏನು ಯೋಜನೆ ಘೋಷಣೆ ಮಾಡುತ್ತಾರೆ ಕಾದು ನೋಡಬೇಕು ಎಂದರು.

ವಿಪಕ್ಷ ನಾಯಕ ಕೊಠಡಿ ಪೂಜೆ 
ಹನ್ನೊಂದು ವರ್ಷಗಳ ಬಳಿಕ ಬಿ.ಎಸ್‌.ಯಡಿಯೂರಪ್ಪ ಮತ್ತೆ ವಿಪಕ್ಷ ನಾಯಕರಾಗಿ ಅಧಿವೇಶನದಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೂ ಮುಂಚೆ ವಿಧಾನಸೌಧದಲ್ಲಿ ವಿಪಕ್ಷ ನಾಯಕರ ಕೊಠಡಿಗೆ ಪುರೋಹಿತರಿಂದ ಪೂಜೆ ಮಾಡಿಸಿದ್ದಾರೆ. ಬಿಎಸ್​ವೈ ಇದುವರೆಗೂ ಮೂರು ಬಾರಿ ವಿಪಕ್ಷ ನಾಯಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಕಚೇರಿ ಪೂಜೆಯಲ್ಲಿ ಶಾಸಕರಾದ ಸಿ.ಎಂ. ಉದಾಸಿ, ರವೀಂದ್ರನಾಥ್, ಗೋವಿಂದ ಕಾರಜೋಳ, ಮಾಡಾಳ್ ವಿರೂಪಾಕ್ಷಪ್ಪ, ಸಿ.ಸಿ.ಪಾಟೀಲ್ ಸೇರಿ ಹಲವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

19 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

21 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

22 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

22 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

22 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

22 hours ago