ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ವಿರುದ್ದ ಹೇಳಿಕೆ ನೀಡಿದ್ದ ಬಿಜೆಪಿಯ ಮುಖಂಡ ಅನಂತಕುಮಾರ್ ಹೆಗಡೆ ಅವರನ್ನು ಸ್ವಾತಂತ್ರ್ಯ ಹೋರಾಟಗಾರರು, ಮಹಾತ್ಮಾ ಗಾಂಧಿ ಅವರ ಮೇಲೆ ಬಿಜೆಪಿ ನಾಯಕರಿಗೆ ಸ್ವಲ್ಪವಾದರೂ ಗೌರವವಿದ್ದರೆ ಶೀಘ್ರವೇ ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.
ಈ ಹಿಂದೆ ಅನಂತ್ ಕುಮಾರ್ ಹೆಗಡೆ ಅವರು ಗಾಂಧಿ ಕೊಂದ ನಾಥೂರಾಮ್ ಗೋಡ್ಸೆ ಸಮರ್ಥಿಸಿಕೊಂಡು ಟ್ವೀಟ್ ಮಾಡಿದ್ದು, ಬಳಿಕ ತಮ್ಮ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟ್ಟರ್ ಖಾತೆ ಹ್ಯಾಕ್ ಅಗಿತ್ತು ಎಂದು ಸಮರ್ಥನೆ ನೀಡಿದ್ದರು.
ಈಗ ಗಾಂಧಿ ಅಂಥವರನ್ನು ”ಮಹಾತ್ಮ” ಎಂದು ಭಾರತದಲ್ಲಿ ಏಕೆ ಕರೆಯುತ್ತಾರೆ. ಗಾಂಧಿ ನಡೆಸಿದ ಸ್ವಾತಂತ್ರ್ಯ ಹೋರಾಟವನ್ನು ದೊಡ್ಡ ನಾಟಕ ಎಂದು ಹೇಳಿದ್ದಾರೆ.
ಬ್ರಿಟಿಷರ ಬೆಂಬಲದಿಂದ ನಡೆದ ಪೂರ್ವನಿಯೋಜಿತ ನಾಟಕದಲ್ಲಿ ಗಾಂಧಿ ಪಾತ್ರಧಾರಿಯಾಗಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಈ ನಾಯಕರನ್ನು ಪೊಲೀಸರು ಎಂದು ಮುಟ್ಟಿಲ್ಲ. ಬ್ರಿಟಿಷರ ಅನುಮತಿಯಿಂದ ಸತ್ಯಾಗ್ರಹ, ಪ್ರತಿಭಟನೆ ನಾಟಕ ನಡೆಸಲಾಗಿತ್ತು. ಇದು ನಿಜವಾದ ಸ್ವಾತಂತ್ರ್ಯ ಹೋರಾಟವೇ ಅಲ್ಲ, ಅನುಕೂಲ ಸ್ವಾತಂತ್ರ್ಯ ಚಳವಳಿ ಎಂದು ಅನಂತಕುಮಾರ್ ಹೇಳಿದ್ದಾರೆ.
ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಗಾಂಧಿ ಅವರು ನಡೆಸಿದ ಅಮರಣಾಂತ ಉಪವಾಸ ಸತ್ಯಾಗ್ರಹವೇ ಕಾರಣ ಎಂದು ಬಿಂಬಿಸಲಾಗಿದೆ. ಆದರೆ ಇದು ಸತ್ಯವಲ್ಲ, ಸತ್ಯಾಗ್ರಹದಿಂದ ಬ್ರಿಟಿಷರು ಭಾರತವನ್ನು ತೊರೆಯಲಿಲ್ಲ. ಭಾರತದ ಇತಿಹಾಸ ಓದಿದರೆ ನನ್ನ ರಕ್ತಕುದಿಯುತ್ತದೆ. ಹೇಗೆ ಇಂಥವರನ್ನು ಮಹಾತ್ಮ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರು, ಮಹಾತ್ಮ ಗಾಂಧೀಜಿ ಅವರ ಮೇಲೆ ಬಿಜೆಪಿ ನಾಯಕರಿಗೆ ಸ್ವಲ್ಪವಾದರೂ ಗೌರವವಿದ್ದರೆ ಶೀಘ್ರವೇ ಅನಂತ್ ಕುಮಾರ ಹೆಗಡೆ ಅವರನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಡಿ.ಕೆ. ಸುರೇಶ್ ಆಗ್ರಹಿಸಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…
ಡಿವೈಡರ್‌ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…