Featured

ಅನರ್ಹರ ಬಿಪಿಎಲ್​ ಕಾರ್ಡ್​ ರದ್ದು ಮಾಡಿ ಆದರೆ ಅರ್ಹರ ಕಾರ್ಡ್ ರದ್ದಾಗಬಾರದು: ಸಿಎಂ ಸೂಚನೆ  – vishwanews24

ಅನರ್ಹರ ಬಿಪಿಎಲ್​ ಕಾರ್ಡ್​ ರದ್ದು ಮಾಡಿ ಆದರೆ ಅರ್ಹರ ಕಾರ್ಡ್ ರದ್ದಾಗಬಾರದು: ಸಿಎಂ ಸೂಚನೆ

ಬೆಂಗಳೂರು :ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಲವು ಆದೇಶಗಳನ್ನು ನೀಡಿದ್ದಾರೆ.

ಅನರ್ಹ ಬಿಪಿಎಲ್ ಕಾರ್ಡುದಾರರು ಸ್ವಯಂ ಪ್ರೇರಿತವಾಗಿ ತಮ್ಮ ಕಾರ್ಡ್‍ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಅದಾದ ನಂತರ ಅಂಥವರಿಗೆ ನೊಟೀಸ್ ನೀಡಿ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 4518 ಪೆಟ್ರೋಲ್‌ ಬಂಕ್‌ಗಳಿದ್ದು, ಡಿಸೆಂಬರ್‌ ಅಂತ್ಯದವರೆಗೆ 503 ಪೆಟ್ರೋಲ್‌ ಬಂಕ್‌ಗಳ ತಪಾಸಣೆ ಮಾಡಲಾಗಿದೆ. ಪೆಟ್ರೋಲ್‌ ಬಂಕ್‌ಗಳ ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ತಿಳಿಸಿದರು.

ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲಾ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.ರಾಜ್ಯದಲ್ಲಿ 1,53,69,945 ಪಡಿತರ ಚೀಟಿಗಳಿದ್ದು, 5,30,88,636 ಸದಸ್ಯ ಫಲಾನುಭವಿಗಳಿದ್ದಾರೆ. ಇಲಾಖೆಯಲ್ಲಿ ಒಟ್ಟು 709 ಹುದ್ದೆಗಳು ಖಾಲಿಯಿವೆ.ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ ಎಂದರು.

ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago