ಅನರ್ಹ ಶಾಸಕರ ಅರ್ಜಿ ವಿಚಾರಣೆ ಸೆಪ್ಟೆಂಬರ್ 23ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ಕಾಂಗ್ರೆಸ್-ಜೆಡಿಎಸ್ ನ 17 ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ಆದೇಶದ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.ಇದರಿಂದ ಅನರ್ಹ ಶಾಸಕರ ಕಾನೂನು ಹೋರಾಟಕ್ಕೆ ಭಾರೀ ಹಿನ್ನಡೆಯಾದಂತಾಗಿದೆ.

ಅನರ್ಹ ಶಾಸಕರ ಅರ್ಜಿ ವಿಚಾರಣೆಯಿಂದ ನ್ಯಾ. ಮೋಹನ್ ಶಾಂತನಗೌಡರ್ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಈಗ ಬೇರೆ ನ್ಯಾಯಮೂರ್ತಿಗಳು ಪೀಠಕ್ಕೆ ನೇಮಕವಾಗಬೇಕಾಗಿದೆ.

ಪ್ರಕರಣದ ತುರ್ತು ವಿಚಾರಣೆ ಕೋರಿ ಅನರ್ಹರ ಪರ ವಕೀಲರು ಈ ಹಿಂದೆ ಮೂರು ಬಾರಿ ಮಾಡಿಕೊಂಡ ಮನವಿಯನ್ನು ತಿರಸ್ಕರಿಸಿದ್ದ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ ಇದೀಗ ಮತ್ತೊಮ್ಮೆ ಅನರ್ಹ ಶಾಸಕರ ವಿಚಾರಣೆಯನ್ನು ಮುಂದೂಡಿದೆ. ಇನ್ನು ಪ್ರಕರಣದ ವಿಚಾರಣೆಯಿಂದ ನ್ಯಾ. ಶಾಂತನಗೌಡರು ಹಿಂದೆ ಸರಿದಿದ್ದಾರೆ. ಹೀಗಾಗಿ ಮತ್ತೆ ಮುಖ್ಯ ನ್ಯಾಯಾಧೀಶರು ಈ ಪೀಠಕ್ಕೆ ಮತ್ತೊಬ್ಬ ನ್ಯಾಯಾಧೀಶರನ್ನು ನೇಮಕ ಮಾಡುವ ಅವಶ್ಯಕತೆ ಇದೆ. ಅಲ್ಲಿ ತನಕ ಅನರ್ಹ ಶಾಸಕರ ಎದೆ ಬಡಿತ ಹೆಚ್ಚಾಗಿ ಇರುತ್ತದೆ.