Featured

ಅನರ್ಹ ಶಾಸಕರ ಮೇಲೆ ಅನಗತ್ಯ ಆರೋಪ ಮಾಡುವುದು ಸರಿಯಲ್ಲ : ಶಿವರಾಮ್ ಹೆಬ್ಬಾರ್ -Vishwanews24

ಬೆಂಗಳೂರು : ಅನರ್ಹ ಶಾಸಕರ ಮೇಲೆ ಅನಗತ್ಯ ಆರೋಪ ಮಾಡುವುದು ಸರಿಯಲ್ಲ ಎಂದು ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ಪಕ್ಷವನ್ನು ಬಿಡಲು ಕೋಟಿಗಟ್ಟಲೆ ಹಣ ಪಡೆಯಲಾಗಿದೆ ಎಂದು ಹೇಳುವ ಸಿದ್ದರಾಮಯ್ಯನವರು ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.

ಅಧಿಕಾರ ಬಿಡಲು ಸಿದ್ಧವಾಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಬೇಜವಾಬ್ದಾರಿ ಹೇಳಿಕೆ ನೀಡುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ. ಹಣ ಮತ್ತು ಅಧಿಕಾರಕ್ಕಾಗಿ ನಾವು ಪಕ್ಷ ಬಿಟ್ಟಿದ್ದೇವೆ ಎಂದು ಹೇಳುವವರು ಅಧಿಕಾರ ಬಿಡಲು ಸಿದ್ಧವಾಗಿದ್ದರೆ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ರಾಜ್ಯ ರಾಜಕಾರಣದ ಈ ದಿಢೀರ್ ಬೆಳವಣಿಗೆ ಬಗ್ಗೆ ಹೇಳುವುದು ಸಾಕಷ್ಟಿದೆ. ಇಲ್ಲಿ ಯಾರು ಸತ್ಯ ಹರಿಶ್ಚಂದ್ರರು ಎಂದು ತಿಳಿಸುತ್ತೇವೆ. ಸುಪ್ರಿಂ ಕೋರ್ಟ್ ತೀರ್ಪಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಎಲ್ಲವನ್ನೂ ಹೇಳುತ್ತೇವೆ. ಸಾಕಷ್ಟು ಶಾಸಕರು ಏಕಾಏಕಿ ಪಕ್ಷ ತೊರೆಯುತ್ತಾರೆಂದರೆ ಯಾಕೆ? ಈಗ ಆ ಪಕ್ಷದ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಾವ ತಪ್ಪಿನಿಂದ ಇಷ್ಟು ದೊಡ್ಡ ಬೆಳವಣಿಗೆ ನಡೆಯಿತು ಎಂದು ಪ್ರಶ್ನೆ ಮಾಡಿದರು.

ಸಾವಿರಾರು ಕೋಟಿ ರೂಪಾಯಿ ಒಡೆಯರು ಕೂಡ ಸಚಿವ ಸ್ಥಾನ ತ್ಯಜಿಸಿದ್ದು ಏಕೆ? ಇಂಥ ಇನ್ನೂ ಹಲವು ವಿಚಾರಗಳಿವೆ. ಯಾರ‍್ಯಾರು ಅಧಿಕಾರ ತ್ಯಾಗ ಮಾಡುವುದಾಗಿ ಹೇಳಿ 30 ವರ್ಷಗಳಿಂದ ಹಾಗೆಯೇ ಮುಂದುವರಿಯುತ್ತಿದ್ದಾರೆ, ಅವರೆಲ್ಲರ ಬಗ್ಗೆಯೂ ತಿಳಿಸುತ್ತೇವೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕರ ಮೇಲೆ ಮಾಜಿ ಶಾಸಕ ಹೆಬ್ಬಾರ್ ಅಸಮಾಧಾನ ಹೊರಹಾಕಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago