ಬೆಂಗಳೂರು : ಅನರ್ಹ ಶಾಸಕರ ಮೇಲೆ ಅನಗತ್ಯ ಆರೋಪ ಮಾಡುವುದು ಸರಿಯಲ್ಲ ಎಂದು ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಪಕ್ಷವನ್ನು ಬಿಡಲು ಕೋಟಿಗಟ್ಟಲೆ ಹಣ ಪಡೆಯಲಾಗಿದೆ ಎಂದು ಹೇಳುವ ಸಿದ್ದರಾಮಯ್ಯನವರು ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.
ಅಧಿಕಾರ ಬಿಡಲು ಸಿದ್ಧವಾಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಬೇಜವಾಬ್ದಾರಿ ಹೇಳಿಕೆ ನೀಡುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ. ಹಣ ಮತ್ತು ಅಧಿಕಾರಕ್ಕಾಗಿ ನಾವು ಪಕ್ಷ ಬಿಟ್ಟಿದ್ದೇವೆ ಎಂದು ಹೇಳುವವರು ಅಧಿಕಾರ ಬಿಡಲು ಸಿದ್ಧವಾಗಿದ್ದರೆ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ರಾಜ್ಯ ರಾಜಕಾರಣದ ಈ ದಿಢೀರ್ ಬೆಳವಣಿಗೆ ಬಗ್ಗೆ ಹೇಳುವುದು ಸಾಕಷ್ಟಿದೆ. ಇಲ್ಲಿ ಯಾರು ಸತ್ಯ ಹರಿಶ್ಚಂದ್ರರು ಎಂದು ತಿಳಿಸುತ್ತೇವೆ. ಸುಪ್ರಿಂ ಕೋರ್ಟ್ ತೀರ್ಪಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಎಲ್ಲವನ್ನೂ ಹೇಳುತ್ತೇವೆ. ಸಾಕಷ್ಟು ಶಾಸಕರು ಏಕಾಏಕಿ ಪಕ್ಷ ತೊರೆಯುತ್ತಾರೆಂದರೆ ಯಾಕೆ? ಈಗ ಆ ಪಕ್ಷದ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಾವ ತಪ್ಪಿನಿಂದ ಇಷ್ಟು ದೊಡ್ಡ ಬೆಳವಣಿಗೆ ನಡೆಯಿತು ಎಂದು ಪ್ರಶ್ನೆ ಮಾಡಿದರು.
ಸಾವಿರಾರು ಕೋಟಿ ರೂಪಾಯಿ ಒಡೆಯರು ಕೂಡ ಸಚಿವ ಸ್ಥಾನ ತ್ಯಜಿಸಿದ್ದು ಏಕೆ? ಇಂಥ ಇನ್ನೂ ಹಲವು ವಿಚಾರಗಳಿವೆ. ಯಾರ‍್ಯಾರು ಅಧಿಕಾರ ತ್ಯಾಗ ಮಾಡುವುದಾಗಿ ಹೇಳಿ 30 ವರ್ಷಗಳಿಂದ ಹಾಗೆಯೇ ಮುಂದುವರಿಯುತ್ತಿದ್ದಾರೆ, ಅವರೆಲ್ಲರ ಬಗ್ಗೆಯೂ ತಿಳಿಸುತ್ತೇವೆ ಎಂದು ಕಾಂಗ್ರೆಸ್ನ ಹಿರಿಯ ನಾಯಕರ ಮೇಲೆ ಮಾಜಿ ಶಾಸಕ ಹೆಬ್ಬಾರ್ ಅಸಮಾಧಾನ ಹೊರಹಾಕಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…