ಬೆಂಗಳೂರು: ಅನರ್ಹ ಶಾಸಕರ ಮೇಲ್ಮನವಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ.
ಸ್ಪೀಕರ್ ಆದೇಶ ಪ್ರಶ್ನಿಸಿ 17 ಜನ ಅನರ್ಹ ಶಾಸಕರು ಮೇಲ್ಮನವಿ ಸಲ್ಲಿಸಿದ್ದರು. ಅನರ್ಹ ಶಾಸಕರ ಪರ ಹಿರಿಯ ವಕೀಲ ವಿ.ಗಿರಿ ಅವರು ತ್ವರಿತ ವಿಚಾರಣೆ ಕೋರಿ ಮಾಡಿಕೊಂಡ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು, ರಿಜಿಸ್ಟ್ರಾರ್ ಅವರಿಗೆ ಪ್ರಕರಣವನ್ನು ಲಿಸ್ಟ್ ಮಾಡುವಂತೆ ಸೂಚಿಸಿತು.
ಈ ಹಿಂದೆಯೂ ಒಮ್ಮೆ ತ್ವರಿತ ವಿಚಾರಣೆಗೆ ಸುಪ್ರೀಂ ಕೋರ್ಟ್ ಪೀಠದೆದುರು ಅನರ್ಹರ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಮನವಿ ಸಲ್ಲಿಸಿದ್ದರು. ಆದರೆ, ರಿಜಿಸ್ಟ್ರಾರ್‌ರಿಂದಲೇ ವಿಚಾರಣೆಗೆ ಲಿಸ್ಟ್ ಆಗಲಿ ಎಂದು ಪೀಠ ತಿಳಿಸಿತ್ತು.
ಅನರ್ಹಗೊಂಡಿರುವ ಶಾಸಕರು ಯಾವುದೇ ಸಾಂವಿಧಾನಿಕ ಹುದ್ದೆ ಅಲಂಕರಿಸುವಂತಿಲ್ಲ ಹಾಗೂ 15ನೇ ವಿಧಾನಸಭೆ ಅವಧಿ (2023 ರವರೆಗೆ) ಮುಗಿಯುವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಹಿಂದಿನ ಸಭಾಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ತೀರ್ಪು ನೀಡಿದ್ದರು.
ಜುಲೈ 26 ಹಾಗೂ ಆಗಸ್ಟ್ 1 ರಂದು ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ 17 ಜನ ಅನರ್ಹ ಶಾಸಕರು ಅರ್ಜಿ ಸಲ್ಲಿಸಿದ್ದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…