Featured

ಅನರ್ಹ ಶಾಸಕರ 17 ಕ್ಷೇತ್ರಗಳಿಗೆ ಕಾಂಗ್ರೆಸ್ ನಿಂದ ವೀಕ್ಷಕರ ನೇಮಕ -Vishwanews24

ಬೆಂಗಳೂರು : ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಕ್ಷೇತ್ರಗಳಿಗೆ ಇದೀಗ ಕೈ ನಿಂದ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಹಿರಿಯ ಮುಖಂಡರ ನೇತೃತ್ವದ ವೀಕ್ಷಕರನ್ನು ರಚಿಸಿದೆ..

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ, ಶಾಕ್ ಕೊಟ್ಟಿದ್ದ ಅನರ್ಹ ಶಾಸಕರಿಗೆ, ಇದೀಗ ಕಾಂಗ್ರೆಸ್ ಮತ್ತೊಂದು ಶಾಕ್ ನೀಡಿದೆ. ಕಾಂಗ್ರೆಸ್, ಜೆಡಿಎಸ್ ನ ಅನರ್ಹಗೊಂಡ ಶಾಸಕರ 17 ಕ್ಷೇತ್ರಗಳಲ್ಲೂ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಹಿರಿಯ ಮುಖಂಡರ ನೇತೃತ್ವದ ತಂಡವನ್ನು ಕೈ ರಚಿಸಿದೆ.

ಈ ಕುರಿತು ಚರ್ಚೆ ನಡೆಸಿದ ಕಾಂಗ್ರೆಸ್ ನ ರಾಜ್ಯದ ಹಿರಿಯ ನಾಯಕರು, 17 ಅನರ್ಹ ಶಾಸಕರ ಕ್ಷೇತ್ರದಲ್ಲಿ ಉಪಚುನಾವಣೆಗೆ ಪೂರ್ವವಾಗಿ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಈ ಬಳಿಕ 17 ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಉಸ್ತುವಾರಿಗಳನ್ನು ನೇಮಕ ಮಾಡಲು ತೀರ್ಮಾನಿಸಿದೆ. ಅದರಂತೆ ಈ ಕೆಳಗಿನ ನಾಯಕರಿಗೆ ಆಯಾ ಕ್ಷೇತ್ರದ ಉಸ್ತುವಾರಿಯ ಜವಾಬ್ದಾರಿಯನ್ನು ಹೊರಿಸಿದೆ.

ಆರ್. ಆರ್ ನಗರಕ್ಕೆ ಸಂಸದ ಡಿ.ಕೆ ಸುರೇಶ್, ಕೆ.ಆರ್ ಪುರಂ ಕ್ಷೇತ್ರಕ್ಕೆ ಕೆ.ಜೆ ಜಾರ್ಜ್, ಯಶವಂತಪುರ ಕ್ಷೇತ್ರಕ್ಕೆ ಎಂ.ಕೃಷ್ಣಪ್ಪ ಮತ್ತು ಜಮೀರ್ ಅಹ್ಮದ್ ಖಾನ್,  ಮಹಾಲಕ್ಷ್ಮಿ ಲೇಔಟ್ ಕ್ಷೇತ್ರಕ್ಕೆ ಮಾಗಡಿ ಬಾಲಕೃಷ್ಣ,  ಕೆ.ಆರ್ ಪೇಟೆ ಕ್ಷೇತ್ರಕ್ಕೆ ಚಲುವರಾಯಸ್ವಾಮಿ, ಹುಣಸೂರು ಕ್ಷೇತ್ರಕ್ಕೆ ಮಾಜಿ ಸಚಿವ ಮಹದೇವಪ್ಪರನ್ನ ನೇಮಕ ಮಾಡಿದೆ.

ಹಾಗೆಯೇ ರಾಣಿಬೆನ್ನೂರು ಕ್ಷೇಥ್ರಕ್ಕೆ ಹೆಚ್ಎಂ ರೇವಣ್ಣ, ಗೋಕಾಕ್ ಗೆ ಶೀವಾನಂದ ಪಾಟೀಲ್, ಹೊಸಕೋಟೆ ಕೃಷ್ಣೇಭೈರೇಗೌಡ, ಮಸ್ಕಿ ಈಶ್ವರ್ ಖಂಡ್ರೆ, ಹಿರೇಕೆರೂರುಗೆ ಹೆಚ್.ಕೆ ಪಾಟೀಲ್,  ಅಥಣಿ ಕ್ಷೇತ್ರಕ್ಕೆ ಎಂ.ಬಿ ಪಾಟೀಲ್, ಕಾಗವಾಡ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಅವರನ್ನ ಕಾಂಗ್ರೆಸ್ ನೇಮಕ ಮಾಡಿದೆ.

ಇನ್ನುಳಿದ ಕ್ಷೇತ್ರಗಳಿಗೂ ಸದ್ಯದಲ್ಲಿಯೇ ವೀಕ್ಷಕರನ್ನು ನೇಮಿಸಲಿರುವ ಕಾಂಗ್ರೆಸ್, ಈ ನಾಯಕರು ಆಯಾ ಜವಾಬ್ದಾರಿ ವಹಿಸಿದ ಕ್ಷೇತ್ರಗಳಿಗೆ ತೆರಳಿ, ಕಾರ್ಯಕರ್ತರ ಜೊತೆಗೆ ಅಲ್ಲಿನ ಸ್ಥಳೀಯ ಮುಖಂಡರ ಜೊತೆಗೆ ಸಭೆ ನಡೆಸಿ, ಚರ್ಚೆ ನಡೆಸಿ, ಪಕ್ಷ ಬಲವರ್ಧನೆಗೆ ಪ್ರಯತ್ನ ನಡೆಸಲಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago