Featured

ಅನಾರೋಗ್ಯ – ಕಾಪು ಕಾಲೇಜು ಉಪನ್ಯಾಸಕಿ ಮೃತ್ಯು – Vishwanews24

ಅನಾರೋಗ್ಯ – ಕಾಪು ಕಾಲೇಜು ಉಪನ್ಯಾಸಕಿ ಮೃತ್ಯು

ಉಡುಪಿ: ಅನಾರೋಗ್ಯದಿಂದ ಅಸ್ವಸ್ಥಗೊಂಡು ಕಾಪು ಕಾಲೇಜಿನ ಉಪನ್ಯಾಸಕಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಪು ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿಕೊಂಡಿದ್ದ ಸುಶೀಲ (39) ಮೃತಪಟ್ಟವರು. ಇವರು ಫೆ.3 ರಂದು ತಮ್ಮ ಗಂಡನ ಬೈಕಿನಲ್ಲಿ ಹೋಗುತ್ತಿರುವಾಗ ಪುತ್ತೂರು ಗ್ರಾಮದ ಸಂತೆಕಟ್ಟೆ ಮಾಸ್ತಿಯಮ್ಮ ದೇವಸ್ಥಾನದ ಬಳಿ ತಲೆ ಸುತ್ತು ಬರುತ್ತಿರುವಾಗಿ ತಿಳಿಸಿದ ಮೇರೆಗೆ ಬೈಕ್‌ ನಿಲ್ಲಿಸಿದಾಗ, ಬೈಕ್‌ನಿಂದ ಇಳಿದು ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿನ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಅಣ್ಣ ಗಣೇಶ್‌ ಎಂಬವರು ನೀಡಿದ ಮಾಹಿತಿಯಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

17 minutes ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

30 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

35 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

1 hour ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

1 hour ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago