ನವದೆಹಲಿ: ಅನಾರೋಗ್ಯ ಕಾರಣದಿಂದ ನಾನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಘೋಷಿಸಿದ್ದಾರೆ. ರಾಜಸ್ಥಾನದಿಂದ ಬುಧವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿದ್ದಾರೆ. ಈ ಬೆಳವಣಿಗೆಯ ಒಂದು ದಿನದ ನಂತರ ಲೋಕಸಭೆಗೆ ಸ್ಪರ್ಧಿಸದಿರಲು ಕಾರಣ ಬಹಿರಂಗಪಡಿಸಿದ್ದಾರೆ.
ಈ ಕುರಿತು ಅಧಿಕೃತ ಪ್ರಕಟಣೆ ಹಂಚಿಕೊಂಡಿರುವ ಅವರು, ಹೆಚ್ಚುತ್ತಿರುವ ವಯಸ್ಸಿನ ಕಾರಣ ಹಾಗೂ ಅನಾರೋಗ್ಯದಿಂದಾಗಿ ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಈ ನಿರ್ಧಾರದ ನಂತರ, ನೇರವಾಗಿ ನಿಮ್ಮ ಸೇವೆ ಮಾಡಲು ನನಗೆ ಅವಕಾಶ ಸಿಗುವುದಿಲ್ಲ. ಆದ್ರೆ ಖಂಡಿತವಾಗಿಯೂ, ನನ್ನ ಹೃದಯ ಮತ್ತು ಆತ್ಮ ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ ಎಂದೆ ಎಂದು ಭಾವುಕರಾಗಿದ್ದಾರೆ.
ರಾಯ್ ಬರೇಲಿ ಕ್ಷೇತ್ರದ ಜನರೊಂದಿಗಿನ ಅವಿನಾಭಾವ ಸಂಬಂಧ ಬಹಳ ಹಳೆಯದ್ದು. ರಾಯ್ ಬರೇಲಿಯೊಂದಿಗೆ ನಮ್ಮ ಕುಟುಂಬದ ಸಂಬಂಧಗಳು ತುಂಬಾ ಆಳವಾಗಿವೆ. ಸ್ವಾತಂತ್ರ್ಯಾ ನಂತರ ನಡೆದ ಮೊದಲ ಲೋಕಸಭೆ ಚುನಾವಣೆಯಲ್ಲಿ ಫಿರೋಜ್ ಗಾಂಧಿ ಅವರನ್ನು ಕ್ಷೇತ್ರದ ಜನ ಗೆಲ್ಲಿಸಿದ್ದರು. ನಂತರ ಇಂದಿರಾ ಗಾಂಧಿ ಅವರನ್ನು ಗೆಲ್ಲಿಸಿದರು. ಅಲ್ಲಿಂದ, ಇಲ್ಲಿಯವೆರೆಗೆ ಇಲ್ಲಿನ ಜನರ ಪ್ರೀತಿ, ವಿಶ್ವಾಸ, ನಂಬಿಕೆ ಬಲವಾಗಿದೆ ಎಂದು ಸೋನಿಯಾ ಗಾಂಧಿ ಸ್ಮರಿಸಿದ್ದಾರೆ.
ಈ ಪ್ರಕಾಶಮಾನ ಹಾದಿಯಲ್ಲಿ ನಡೆಯಲು ನೀವು ನನಗೆ ಜಾಗ ಕೊಟ್ಟಿದ್ದೀರಿ. ನನ್ನ ಜೀವನ ಸಂಗಾತಿಯನ್ನು ಶಾಶ್ವತವಾಗಿ ಕಳೆದುಕೊಂಡ ನಂತರ, ನಿಮ್ಮ ಬಳಿಗೆ ಬಂದೆ, ಆಗ ನೀವು ಪ್ರೀತಿಯ ಅಪ್ಪುಗೆ ನೀಡಿದಿರಿ. ಕಳೆದೆರಡು ಚುನಾವಣೆಗಳಲ್ಲಿ ಕಷ್ಟದ ಸಂದರ್ಭದಲ್ಲೂ ಬಂಡೆಯಂತೆ ನಿಂತೆ. ಇದನ್ನು ಮರೆಯಲು ಸಾಧ್ಯವೇ ಇಲ್ಲ, ಇಂದು ನಾನು ಏನಾಗಿದ್ದರೂ ನಿಮ್ಮಿಂದಲೇ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಈ ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದ್ದೇನೆ ಎಂದು ಭಾವುರಾಗಿ ಪತ್ರದಲ್ಲಿ ಬರೆದಿದ್ದಾರೆ.
ಬುಧವಾರ ಜೈಪುರದಲ್ಲಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…