Featured

ಅನಾರೋಗ್ಯ ಕಾರಣದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ : ಸೋನಿಯಾ ಗಾಂಧಿ – Vishwanews24

ಅನಾರೋಗ್ಯ ಕಾರಣದಿಂದ ನಾನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ : ಸೋನಿಯಾ ಗಾಂಧಿ

ನವದೆಹಲಿ: ಅನಾರೋಗ್ಯ ಕಾರಣದಿಂದ ನಾನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಘೋಷಿಸಿದ್ದಾರೆ. ರಾಜಸ್ಥಾನದಿಂದ ಬುಧವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿದ್ದಾರೆ. ಈ ಬೆಳವಣಿಗೆಯ ಒಂದು ದಿನದ ನಂತರ ಲೋಕಸಭೆಗೆ  ಸ್ಪರ್ಧಿಸದಿರಲು ಕಾರಣ ಬಹಿರಂಗಪಡಿಸಿದ್ದಾರೆ.

ಈ ಕುರಿತು ಅಧಿಕೃತ ಪ್ರಕಟಣೆ ಹಂಚಿಕೊಂಡಿರುವ ಅವರು, ಹೆಚ್ಚುತ್ತಿರುವ ವಯಸ್ಸಿನ ಕಾರಣ ಹಾಗೂ ಅನಾರೋಗ್ಯದಿಂದಾಗಿ ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಈ ನಿರ್ಧಾರದ ನಂತರ, ನೇರವಾಗಿ ನಿಮ್ಮ ಸೇವೆ ಮಾಡಲು ನನಗೆ ಅವಕಾಶ ಸಿಗುವುದಿಲ್ಲ. ಆದ್ರೆ ಖಂಡಿತವಾಗಿಯೂ, ನನ್ನ ಹೃದಯ ಮತ್ತು ಆತ್ಮ ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ ಎಂದೆ ಎಂದು ಭಾವುಕರಾಗಿದ್ದಾರೆ.

ರಾಯ್‌ ಬರೇಲಿ ಕ್ಷೇತ್ರದ ಜನರೊಂದಿಗಿನ ಅವಿನಾಭಾವ ಸಂಬಂಧ ಬಹಳ ಹಳೆಯದ್ದು. ರಾಯ್ ಬರೇಲಿಯೊಂದಿಗೆ ನಮ್ಮ ಕುಟುಂಬದ ಸಂಬಂಧಗಳು ತುಂಬಾ ಆಳವಾಗಿವೆ. ಸ್ವಾತಂತ್ರ್ಯಾ ನಂತರ ನಡೆದ ಮೊದಲ ಲೋಕಸಭೆ ಚುನಾವಣೆಯಲ್ಲಿ ಫಿರೋಜ್ ಗಾಂಧಿ ಅವರನ್ನು ಕ್ಷೇತ್ರದ ಜನ ಗೆಲ್ಲಿಸಿದ್ದರು. ನಂತರ ಇಂದಿರಾ ಗಾಂಧಿ ಅವರನ್ನು ಗೆಲ್ಲಿಸಿದರು. ಅಲ್ಲಿಂದ, ಇಲ್ಲಿಯವೆರೆಗೆ ಇಲ್ಲಿನ ಜನರ ಪ್ರೀತಿ, ವಿಶ್ವಾಸ, ನಂಬಿಕೆ ಬಲವಾಗಿದೆ ಎಂದು ಸೋನಿಯಾ ಗಾಂಧಿ ಸ್ಮರಿಸಿದ್ದಾರೆ.

ಈ ಪ್ರಕಾಶಮಾನ ಹಾದಿಯಲ್ಲಿ ನಡೆಯಲು ನೀವು ನನಗೆ ಜಾಗ ಕೊಟ್ಟಿದ್ದೀರಿ. ನನ್ನ ಜೀವನ ಸಂಗಾತಿಯನ್ನು ಶಾಶ್ವತವಾಗಿ ಕಳೆದುಕೊಂಡ ನಂತರ, ನಿಮ್ಮ ಬಳಿಗೆ ಬಂದೆ, ಆಗ ನೀವು ಪ್ರೀತಿಯ ಅಪ್ಪುಗೆ ನೀಡಿದಿರಿ. ಕಳೆದೆರಡು ಚುನಾವಣೆಗಳಲ್ಲಿ ಕಷ್ಟದ ಸಂದರ್ಭದಲ್ಲೂ ಬಂಡೆಯಂತೆ ನಿಂತೆ. ಇದನ್ನು ಮರೆಯಲು ಸಾಧ್ಯವೇ ಇಲ್ಲ, ಇಂದು ನಾನು ಏನಾಗಿದ್ದರೂ ನಿಮ್ಮಿಂದಲೇ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಈ ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದ್ದೇನೆ ಎಂದು ಭಾವುರಾಗಿ ಪತ್ರದಲ್ಲಿ ಬರೆದಿದ್ದಾರೆ.

ಬುಧವಾರ ಜೈಪುರದಲ್ಲಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗಿದ್ದರು.

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

19 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

19 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

19 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

20 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

20 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

20 hours ago