ಚೆನ್ನೈ : ಅನಾರೋಗ್ಯದಿಂದಾಗಿ ರಾಜಕೀಯ ಪಕ್ಷ ಕಟ್ಟಲು ಆಗುತ್ತಿಲ್ಲ. ಡಿಸೆಂಬರ್ 31ರಂದು ರಾಜಕೀಯ ಪಕ್ಷವನ್ನು ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಘೋಷಿಸಿದ್ದ ನಾನು, ಸದ್ಯಕ್ಕೆ ರಾಜಕೀಯ ಪಕ್ಷ ಘೋಷಣೆಯಿಲ್ಲ ಎನ್ನುವ ಮೂಲಕ, ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯದಿಂದ ಹಿಂದೆ ಸರಿದಿದ್ದಾರೆ.
ಈ ಕುರಿತಂತೆ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿರುವಂತ ಸೂಪರ್ ಸ್ಟಾರ್ ರಜನಿಕಾಂತ್ ಅವರು, ಸದ್ಯಕ್ಕೆ ರಾಜಕೀಯಕ್ಕೆ ಬರಲು ಆಗುವುದಿಲ್ಲ. ಆರೋಗ್ಯ ದೃಷ್ಠಿಯಿಂದ ಪಾರ್ಟಿ ಕಟ್ಟಲು ಆಗ್ತಿಲ್ಲ. ನಿಮ್ಮನ್ನು ನಿರಾಸೆಗೊಳಿಸಿದ್ದಕ್ಕೆ ಕ್ಷಮೆ ಇರಲಿ ಎಂದಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಕಳೆದ ನಾಲ್ಕು ದಿನಗಳ ಹಿಂದಷ್ಟೇ ಅಧಿಕ ರಕ್ತದೊತ್ತಡಕ್ಕೆ ಒಳಗಾಗಿ ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಸೋಮವಾರ ಬೆಳಿಗ್ಗೆಷಟ್ಟೇ ಚಿಕಿತ್ಸೆ ಪಡೆದ ಬಳಿಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇಂತಹ ನಟ ರಜನಿಕಾಂತ್ ಗೆ ಸದ್ಯಕ್ಕೆ ವಿಶ್ರಾಂತಿ ತೆಗೆದುಕೊಳ್ಳುವಂತೆಯೂ ವೈದ್ಯರು ಸೂಚನೆ ನೀಡಿದ್ದರು. ಈ ಎಲ್ಲಾ ಕಾರಣದಿಂದಾಗಿ ನಟ ರಜನಿಕಾಂತ್ ಡಿಸೆಂಬರ್ 31ರಂದು ತಮ್ಮ ಅಧಿಕೃತ ರಾಜಕೀಯ ಪಕ್ಷ ಘೋಷಣೆ ಮಾಡೋದನ್ನು, ರಾಜಕೀಯಕ್ಕೆ ಎಂಟ್ರಿ ಕೊಡೋದಕ್ಕೆ ಬ್ರೇಕ್ ಹಾಕಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…