ಬೆಂಗಳೂರು: “ಅನಿತಾ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಪಕ್ಷದ ಅಭ್ಯರ್ಥಿ ಇಲ್ಲದಿದ್ದಾಗ ಪಕ್ಷದ ಗೌರವ ಉಳಿಸಲು ಅವರನ್ನು ಕರೆದುಕೊಂಡು ಬಂದು ನಿಲ್ಲಿಸಿದೆವು, ನಾವೇ ಅವರನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದೇವೆ ಹೊರತು ಅವರಿಗೆ ಸ್ವಂತ ಆಸಕ್ತಿಯಿರಲಿಲ್ಲ” ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಭವಾನಿಗೆ ಟಿಕೆಟ್ ಕೊಡುವುದಾದರೆ ನನಗೆ ಕೂಡ ನೀಡಬೇಕೆಂದು ಅನಿತಾ ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ ಎಂದು ವರದಿಗಳು ಬರುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಎಚ್‌ಡಿಕೆ, “ನಮ್ಮ ಕುಟುಂಬದಲ್ಲಿ ಅನಿತಾ ಕುಮಾರಸ್ವಾಮಿಯವರನ್ನು ಎರಡು ಮೂರು ಬಾರಿ ಪಕ್ಷದ ಅಭ್ಯರ್ಥಿ ಇಲ್ಲದೇ ಇದ್ದಾಗ ನಿಲ್ಲಿಸಲಾಗಿತ್ತಷ್ಟೆ ಹೊರತು ಅವರಿಗೆ ಆಸಕ್ತಿಯಿರಲಿಲ್ಲ. ಕಾರ್ಯಕರ್ತರು ಮತ್ತು ದೇವೇಗೌಡರ ಸೂಚನೆ ಒತ್ತಡ ಮೇರೆಗೆ ಅನಿತಾ ಚುನಾವಣೆಗೆ ನಿಂತು ಗೆದ್ದರು. ಇನ್ನು ಮುಂದೆ ಅಭ್ಯರ್ಥಿಯಾಗಲು ಅವರಿಗೆ ಒಲವು ಇಲ್ಲ. ಚುನಾವಣಾ ರಾಜಕೀಯದಿಂದ ದೂರವುಳಿದಿದ್ದಾರೆ” ಎಂದರು.
ಇನ್ನು “ಹಾಸನ ಜಿಲ್ಲೆ ರಾಜಕಾರಣ ಬೇರೆ, ನನ್ನ ಹೆಂಡತಿ ರಾಜಕಾರಣ ಬೇರೆ, ಸೊಸೆಯಂದಿರ ಮಧ್ಯೆ ಹೊಡೆದಾಟ ಇಲ್ಲ, ನನ್ನ ಹೆಂಡತಿ ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಹಾಗಾಗಿ ಆ ಕೆಟಗರಿಕೆ ಇಲ್ಲಿಯದನ್ನು ಸೇರಿಸಬೇಕಾಗಿಲ್ಲ. ನನ್ನ ಕುಟುಂಬವನ್ನು ಅನಿತಾ ಕುಮಾರಸ್ವಾಮಿಯನ್ನು ಮಧ್ಯೆ ತರಬೇಡಿ, ಅವರು ಗೌರವಯುತವಾಗಿ ಕುಟುಂಬದ ಮರ್ಯಾದೆ ಉಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.
ಉಡುಪಿ: ಅ.8 ರಂದು ನೇರ ಸಂದರ್ಶನ ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…
ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ ಕಡವಾಡ…
ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…