ಶಿವಮೊಗ್ಗ: ಕೊರೊನಾ ಪಾಸಿಟಿವಿಟಿ ರೇಟ್ ಕನಿಷ್ಠ ಶೇ.5ಕ್ಕೆ ಬರಬೇಕು ಎಂಬುದು ನಮ್ಮ ಅಪೇಕ್ಷೆ. ಹೀಗಾಗಿಯೇ ಎಲ್ಲಿ ಸೋಂಕು ಹೆಚ್ಚಿದೆಯೋ ಅಲ್ಲಿ ಲಾಕ್‌ಡೌನ್ ಮುಂದುವರಿಸಲಾಗಿದೆ. ಅನಿವಾರ್ಯವಾದರೆ ಶೀಘ್ರವೇ ಮತ್ತೊಂದು ಪ್ಯಾಕೇಜ್ ಘೋಷಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ, ಶಿಕಾರಿಪುರ ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಿನ ಪ್ರಮಾಣದಲ್ಲಿದೆ. ಅದನ್ನು ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಲಾಕ್‌ಡೌನ್ ಇನ್ನೂ ಒಂದು ವಾರ ವಿಸ್ತರಿಸಿರುವುದರಿಂದ ಸೋಂಕು ಹತೋಟಿಗೆ ಬರುವ ವಿಶ್ವಾಸ ಇದೆ ಎಂದರು.
ಇನ್ನೊಂದು ವಾರದಲ್ಲಿ ಪಾಸಿಟಿವಿಟಿ ರೇಟ್ ಶೇ.5ಕ್ಕೆ ಬರುತ್ತದೆ ಎಂಬ ವಿಶ್ವಾಸ ಇದೆ. ಆದರೆ ಇದಕ್ಕೆ ಜನ ಸಹಕಾರ ಕೊಡಬೇಕು. ಕಳೆದ ಎಂಟು ತಿಂಗಳಿಂದ ಆದಾಯ ಕುಸಿತವಾಗಿದೆ. ತೆರಿಗೆ ಸಂಗ್ರಹ ಕಡಿಮೆ ಆಗಿದೆ. ಇದರ ನಡುವೆಯೂ ಅಭಿವೃದ್ಧಿ ಕಾರ್ಯಕ್ಕೆ, ನೀರಾವರಿ ಯೋಜನೆಗೆ ಹಣಕಾಸಿನ ಕೊರತೆ ಆಗದಂತೆ ಶಕ್ತಿ ಮೀರಿ ಪ್ರಯತ್ನಿಸಲಾಗುತ್ತಿದೆ. ಹೆಚ್ಚಿನ ಹಣಕಾಸು ನೆರವು ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಾಲ್ಕು ತಿಂಗಳು ಕಳೆದರೆ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಈಗಾಗಲೇ ಬಡವರಿಗೆ ತಲುಪುವಂತಹ ಎರಡು ಪ್ಯಾಕೇಜ್ ನೀಡಲಾಗಿದೆ. ಮುಂದೆ ಅನಿವಾರ್ಯವಾದರೆ ಮತ್ತೂಂದು ಪ್ಯಾಕೇಜ್ ಘೋಷಿಸಲಾಗುವುದು ಎಂದರು. ಒಂದೆರಡು ದಿನದಲ್ಲಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನ್ ಬರಲಿದೆ. ಎಲ್ಲಾ ಜಿಲ್ಲೆಗೂ ಜನಸಂಖ್ಯೆಗೆ ಅನುಗುಣವಾಗಿ ವ್ಯಾಕ್ಸಿನ್ ಸಿಗಲಿದೆ ಎಂದರು.
ಜೂ.17, 18ರ ನಂತರ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬರಲಿದ್ದಾರೆ. ಎರಡು ದಿನ ಕರ್ನಾಟಕದಲ್ಲೇ ಇದ್ದು ಒಂದೆರಡು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅರುಣ್ ಸಿಂಗ್ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…