ತಿರುವನಂತಪುರಂ: ಪಿಎಫ್ಐ ಕಚೇರಿಗಳ ಮೇಲೆ ಎನ್ಐಎ ದಾಳಿಯನ್ನು ಖಂಡಿಸಿ ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಕೇರಳದಲ್ಲಿ ಬಂದ್‌ಗೆ ಕೂಡ ಕರೆ ನೀಡಲಾಗಿದೆ.
ಬಂದ್‌ಗೆ ಕರೆ ನೀಡಿರುವ ಪಿಎಫ್ಐ ವರ್ತನೆಯ ಬಗ್ಗೆ ಕೇರಳ ಹೈಕೋರ್ಟ್ ಇಂದು (ಶುಕ್ರವಾರ) ಸುಯೊ ಮೋಟೋ ದಾಖಲಿಸಿಕೊಂಡಿದೆ. 12 ಗಂಟೆಗಳ ಪ್ರತಿಭಟನೆಯ ಮಧ್ಯೆ ಬಂದ್‌ಗೆ ಕರೆ ನೀಡಲಾಗಿದೆ. ಯಾರೂ ಅನುಮತಿಯಿಲ್ಲದೆ ರಾಜ್ಯದಲ್ಲಿ ಬಂದ್‌ಗೆ ಕರೆ ನೀಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಪಿಎಫ್ಐ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದೆ.
ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಪಿಎಫ್ಐ ಕಚೇರಿ ಮೇಲೆ ಎನ್ಐಎ ದಾಳಿ ಖಂಡಿಸಿ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಕೇರಳ ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೆ, ಅಂಥವರ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಕೇರಳ ಬಂದ್‌ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಿಎಫ್ಐ ನಾಯಕರ ವಿರುದ್ಧ ಕ್ರಮಕ್ಕೆ ಕೋರ್ಟ್ ಸೂಚನೆ ನೀಡಿದೆ.
ಕೇರಳ ರಾಜ್ಯ ಪೊಲೀಸರು “ಸರ್ಕಾರ ಮತ್ತು ಮುಷ್ಕರಕ್ಕಾಗಿ ಕರೆಯನ್ನು ಬೆಂಬಲಿಸದ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಯಾವುದೇ ಹಾನಿ ಅಥವಾ ವಿನಾಶವಾಗದಂತೆ ತಡೆಗಟ್ಟಲು ಕಠಿಣ ಕ್ರಮಗಳನ್ನು ಜಾರಿಗೆ ತರಬೇಕು” ಎಂದು ಹೈಕೋರ್ಟ್ ಹೇಳಿದೆ. ಇಂದು ಬಂದ್ ಪ್ರಾರಂಭವಾಗುತ್ತಿದ್ದಂತೆ ಕೇರಳ ರಾಜ್ಯ ನಡೆಸುವ ಬಸ್ಸುಗಳ ಮೇಲೆ ಕಲ್ಲು ತೂರಾಟ ಮತ್ತು ದಾಳಿಯ ಘಟನೆಗಳು ವರದಿಯಾಗಿವೆ. 15 ರಾಜ್ಯಗಳು ಮತ್ತು 102 ಸ್ಥಳಗಳಲ್ಲಿ ಗುರುವಾರ ದಾಳಿ ನಡೆಸಲಾಯಿತು.
ಇದನ್ನೂ ಓದಿ: ಗಾಂಧಿ ಕುಟುಂಬದಿಂದ ಕಾಂಗ್ರೆಸ್‌ನ ಅಧ್ಯಕ್ಷ ಚುನಾವಣೆಯಲ್ಲಿ ಯಾರೂ ಸ್ಪರ್ಧಿಸುವುದಿಲ್ಲ : ಅಶೋಕ್ ಗೆಹ್ಲೋಟ್ ಸ್ಪಷ್ಟನೆ
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…