ಶಿವಮೊಗ್ಗ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಿವಮೊಗ್ಗ ಭೇಟಿ ಹಿನ್ನೆಲೆಯಲ್ಲಿ ಅನುಮತಿಯಿಲ್ಲದೇ ಬಳಸಲು ಮುಂದಾಗಿದ್ದ ಕಾಂಗ್ರೆಸ್ ಪಕ್ಷದ 500ಕ್ಕೂ ಹೆಚ್ಚು ಬಾವುಟಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ರಾಹುಲ್ ಗಾಂಧಿ ರೋಡ್ ಶೋ ಹಿನ್ನೆಲೆಯಲ್ಲಿ ಪಕ್ಷದ ಬಾವುಟಗಳನ್ನು ಅನುಮತಿ ಇಲ್ಲದೇ ತಂದಿದ್ದರು ಎನ್ನಲಾಗಿದೆ. ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ಬಾವುಟಗಳನ್ನು ಶಿವಮೊಗ್ಗ ಉಪ ವಿಭಾಗಾಧಿಕಾರಿ ದಾಸರಗೌಡ ನೇತೃತ್ವದ ತಂಡ ವಶಪಡಿಸಿಕೊಂಡು ಕೇಸು ದಾಖಲಿಸಿಕೊಂಡಿದೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆ ಮೂಲಕ ಬಿರುಸಿನ ಪ್ರಚಾರ ನಡೆಸಿದ್ದು, ಹೆಲಿಕಾಪ್ಟರ್ ಮೂಲಕ ಆಗಮಿಸಿದ ರಾಹುಲ್ ಗಾಂಧಿಯವರಿಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಅದ್ದೂರಿ ಸ್ವಾಗತ ನೀಡಿದರು. ಶಿವಮೊಗ್ಗದಲ್ಲಿ ಮಾತ್ರ ರಾಹುಲ್ ಗಾಂಧಿ ಕಾರ್ಯಕ್ರಮ ನಿಗದಿಯಾಗಿದ್ದ ಕಾರಣ ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಶಿವಮೊಗ್ಗಕ್ಕೆ ಆಗಮಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…