ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬದ ಒಡೆತನದಲ್ಲಿರುವ ಸಕ್ಕರೆ ಹಾಗೂ ಎಥೆನಾಲ್ ಘಟಕದ ಕಾರ್ಯಾಚರಣೆ ಸ್ಥಗಿತಗೊಳಿಸುವ ಕುರಿತು ಮಾಹಿತಿ ಪಡೆದು ತಿಳಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಯತ್ನಾಳ್ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕ ರಮಣಗೌಡ ಬಿ.ಪಾಟೀಲ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ವಕೀಲರು, ಘಟಕವನ್ನು ರಾಜಕೀಯ ಉದ್ದೇಶದಿಂದ ಸ್ಥಗಿತಗೊಳಿಸಲು ಒತ್ತಾಯಿಸಲಾಗುತ್ತಿದೆ ಎಂದು ವಾದಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕಾರ್ಖಾನೆ ನಿಯಮದ ಪ್ರಕಾರ ನಡೆಯುತ್ತಿಲ್ಲ. ಇದರಿಂದಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ನ್ಯಾಯಾಲಯದ ಮುಂದೆ ವಿವರಿಸಿದ್ದಾರೆ.
ಬಳಿಕ ನ್ಯಾಯಾಲಯ, ಕಾರ್ಖಾನೆ ಮುಚ್ಚುವ ಸಂಬಂಧ ಅರ್ಜಿದಾರರಿಂದ ಮಾಹಿತಿ ಪಡೆದು ತಿಳಿಸಬೇಕು ಎಂದು ಸೂಚಿಸಿದೆ. ಅಲ್ಲದೇ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿದೆ. ಅರ್ಜಿದಾರರು 2021ರಲ್ಲಿ ಕಾರ್ಖಾನೆ ಖರೀದಿಸಿದ್ದು, ನಾವೀಗ 2024ರಲ್ಲಿದ್ದೇವೆ. ಈ ಅವಧಿಯಲ್ಲಿ ಅಗತ್ಯ ಅನುಮತಿ ಪಡೆಯಬೇಕಿತ್ತು. ಕಾನೂನಿನ ಪ್ರಕಾರ ನೀವು ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…