Featured

ಅನುಮತಿ ಪಡೆಯುವವರೆಗೆ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ನಡೆಸಲು ಸಾಧ್ಯವಿಲ್ಲ  : ಕೋರ್ಟ್ – vishwanews24

ಅನುಮತಿ ಪಡೆಯುವವರೆಗೆ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ನಡೆಸಲು ಸಾಧ್ಯವಿಲ್ಲ  : ಕೋರ್ಟ್

ಫೆ.8ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಕುಟುಂಬದ ಒಡೆತನದಲ್ಲಿರುವ ಸಕ್ಕರೆ ಹಾಗೂ ಎಥೆನಾಲ್ ಘಟಕದ ಕಾರ್ಯಾಚರಣೆ ಸ್ಥಗಿತಗೊಳಿಸುವ ಕುರಿತು ಮಾಹಿತಿ ಪಡೆದು ತಿಳಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್  ಸೂಚನೆ ನೀಡಿದೆ.

ಯತ್ನಾಳ್ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕ ರಮಣಗೌಡ ಬಿ.ಪಾಟೀಲ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ವಕೀಲರು, ಘಟಕವನ್ನು ರಾಜಕೀಯ ಉದ್ದೇಶದಿಂದ ಸ್ಥಗಿತಗೊಳಿಸಲು ಒತ್ತಾಯಿಸಲಾಗುತ್ತಿದೆ ಎಂದು ವಾದಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕಾರ್ಖಾನೆ ನಿಯಮದ ಪ್ರಕಾರ ನಡೆಯುತ್ತಿಲ್ಲ. ಇದರಿಂದಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ನ್ಯಾಯಾಲಯದ ಮುಂದೆ ವಿವರಿಸಿದ್ದಾರೆ.

ಬಳಿಕ ನ್ಯಾಯಾಲಯ, ಕಾರ್ಖಾನೆ ಮುಚ್ಚುವ ಸಂಬಂಧ ಅರ್ಜಿದಾರರಿಂದ ಮಾಹಿತಿ ಪಡೆದು ತಿಳಿಸಬೇಕು ಎಂದು ಸೂಚಿಸಿದೆ. ಅಲ್ಲದೇ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿದೆ. ಅರ್ಜಿದಾರರು 2021ರಲ್ಲಿ ಕಾರ್ಖಾನೆ ಖರೀದಿಸಿದ್ದು, ನಾವೀಗ 2024ರಲ್ಲಿದ್ದೇವೆ. ಈ ಅವಧಿಯಲ್ಲಿ ಅಗತ್ಯ ಅನುಮತಿ ಪಡೆಯಬೇಕಿತ್ತು. ಕಾನೂನಿನ ಪ್ರಕಾರ ನೀವು ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago