ಬೆಂಗಳೂರು:ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಅಕ್ಕಿ ಪ್ರಮಾಣವನ್ನು ಕಡಿತ ಮಾಡುವ ಯಾವುದೇ ಯೋಜನೆ ನಮ್ಮ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಮೈತ್ರಿ ಸರ್ಕಾರದ ಜನಪ್ರಿಯ ಯೋಜನೆಗಳನ್ನು ರದ್ದು ಮಾಡಲ್ಲ ಅಂತ ಸಿಎಂ ಬಿಎಸ್ ಯಡಿಯೂರಪ್ಪನವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಅವರು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದ್ದು, ಯೋಜನೆ ಮುಂದವರಿಯಲು ಬೇಕಾದ ಹಣ ಬಿಡುಗಡೆಗೆ ಫೈಲ್ ಸಹಿ ಮಾಡಿದ್ದೇನೆ ಅಂತ ಹೇಳಿದ್ದು, ಇನ್ನು ಯೋಜನೆಗಳ ಹಣ ಬಿಡುಗಡೆಗೆ ಸಹಿ ಮಾಡಿದ್ದೇನೆ ಅಂತ ಅವರು ಹೇಳಿದ್ದಾರೆ.
ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಹೊಂದಿಸಲು ‘ಅನ್ನಭಾಗ್ಯ’ ಸೇರಿದಂತೆ ಹಲವು ಜನ ಕಲ್ಯಾಣ ಯೋಜನೆಗಳ ಅನುದಾನ ಕಡಿತ ಮಾಡಲು ಬಿಎಸ್‌ವೈ ನೇತೃತ್ವದ ಸರಕಾರ ಮುಂದಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು, ಹೀಗಾಗಿ ರಾಜ್ಯ ಸರಕಾರದ ವಿರುದ್ದ ವ್ಯಾಪಕಟೀಕೆಗಳನ್ನು ಕಾಂಗ್ರೆಸ್ ಮಾಡುತ್ತ ಬಂದಿತ್ತು.
ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಯ ಏಳು ಕೆ.ಜಿ. ಅಕ್ಕಿಯಲ್ಲಿ ಕಡಿತ ಮಾಡಿದರೆ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ಪ್ರಸ್ತಾವನೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಇದರ ವಿರುದ್ಧ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಅಷ್ಟೇ ಅಲ್ಲ, ಸದನದ ಒಳಗೂ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…