Featured

ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಅಕ್ಕಿ ಪ್ರಮಾಣವನ್ನು ಕಡಿತ ಮಾಡುವ ಯಾವುದೇ ಯೋಜನೆ ನಮ್ಮ ಸರ್ಕಾರದ ಮುಂದಿಲ್ಲ : ಸಿಎಂ ಬಿಎ‌ಸ್‌ವೈ -Vishwanews24

ಬೆಂಗಳೂರು:ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಅಕ್ಕಿ ಪ್ರಮಾಣವನ್ನು ಕಡಿತ ಮಾಡುವ ಯಾವುದೇ ಯೋಜನೆ ನಮ್ಮ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮೈತ್ರಿ ಸರ್ಕಾರದ ಜನಪ್ರಿಯ ಯೋಜನೆಗಳನ್ನು ರದ್ದು ಮಾಡಲ್ಲ ಅಂತ ಸಿಎಂ ಬಿಎಸ್‌ ಯಡಿಯೂರಪ್ಪನವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಅವರು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದ್ದು, ಯೋಜನೆ ಮುಂದವರಿಯಲು ಬೇಕಾದ ಹಣ ಬಿಡುಗಡೆಗೆ ಫೈಲ್​ ಸಹಿ ಮಾಡಿದ್ದೇನೆ ಅಂತ ಹೇಳಿದ್ದು, ಇನ್ನು ಯೋಜನೆಗಳ ಹಣ ಬಿಡುಗಡೆಗೆ ಸಹಿ ಮಾಡಿದ್ದೇನೆ ಅಂತ ಅವರು ಹೇಳಿದ್ದಾರೆ.

ಕಿಸಾನ್‌ ಸಮ್ಮಾನ್‌ ಯೋಜನೆಗೆ ಹಣ ಹೊಂದಿಸಲು ‘ಅನ್ನಭಾಗ್ಯ’ ಸೇರಿದಂತೆ ಹಲವು ಜನ ಕಲ್ಯಾಣ ಯೋಜನೆಗಳ ಅನುದಾನ ಕಡಿತ ಮಾಡಲು ಬಿಎಸ್‌ವೈ ನೇತೃತ್ವದ ಸರಕಾರ ಮುಂದಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು, ಹೀಗಾಗಿ ರಾಜ್ಯ ಸರಕಾರದ ವಿರುದ್ದ ವ್ಯಾಪಕಟೀಕೆಗಳನ್ನು ಕಾಂಗ್ರೆಸ್‌ ಮಾಡುತ್ತ ಬಂದಿತ್ತು.

ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಯ ಏಳು ಕೆ.ಜಿ. ಅಕ್ಕಿಯಲ್ಲಿ ಕಡಿತ ಮಾಡಿದರೆ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ಪ್ರಸ್ತಾವನೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಇದರ ವಿರುದ್ಧ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಅಷ್ಟೇ ಅಲ್ಲ, ಸದನದ ಒಳಗೂ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

21 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago