ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಹಣವನ್ನು ಖಾತೆಗೆ ಜಮೆ ಮಾಡಲು ಇನ್ನು 10-15 ದಿನಗಳ ಕಾಲ ಸಮಯ ಬೇಕಾಗುತ್ತದೆ ಹಾಗಾಗಿ ನಾಳೆಯಿಂದಲೇ ಹಣ ಜಮೆ ಮಾಡಲು ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೊದಲಿಗೆ ಸಮಗ್ರವಾಗಿ ದಾಖಲೆಗಳನ್ನು ಸಂಗ್ರಹಿಸಬೇಕಿದ್ದು, ನಮ್ಮಲ್ಲಿ ಒಟ್ಟು 1.78 ಕೋಟಿ ರೇಷನ್ ಕಾರ್ಡ್‌ಗಳಿವೆ. ಅವುಗಳಲ್ಲಿ 1.28 ಕೋಟಿ ಬಿಪಿಎಲ್ ಕಾರ್ಡ್‌ದಾರರು ಇದ್ದಾರೆ. ಈ ಪೈಕಿ 1.22 ಕೋಟಿ ಕಾರ್ಡ್‌ಗಳಲ್ಲಿ ಕನಿಷ್ಠ ಕುಟುಂಬದ ಒಬ್ಬರಾದರೂ ಬ್ಯಾಂಕ್ ಖಾತೆ ಹೊಂದಿದ್ದಾರೆ. ಇನ್ನುಳಿದ 6 ಲಕ್ಷ ಕಾರ್ಡ್‌ಗಳಲ್ಲಿ ಸಮಸ್ಯೆಯಾಗಿದೆ ಎಂದರು.
ಇನ್ನು ಕೆಲವರು ಬ್ಯಾಂಕ್ ಖಾತೆ ಹೊಂದಿದ್ದರೆ, ಆಧಾರ್ ಲಿಂಕ್ ಆಗಿಲ್ಲ. ಆಧಾರ್ ಲಿಂಕ್ ಆಗಿದ್ದರೆ ಬ್ಯಾಂಕ್ ಖಾತೆ ಆಕ್ಟೀವ್ ಆಗಿಲ್ಲ. ಈ ರೀತಿಯ ಸಮಸ್ಯೆಗಳು ಕಂಡುಬಂದಿರುವುದರಿಂದ ಜೂನ್ 1ರಿಂದ ಎಲ್ಲರ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡೋದು ಕಷ್ಟ ಎಂದಿದ್ದಾರೆ.
ಶೇ.94.6 ಪಡಿತರ ಚೀಟಿಯಲ್ಲಿ ಮಹಿಳೆಯರೇ ಕುಟುಂಬದ ಮುಖ್ಯಸ್ಥರಿದ್ದು, ಶೇ.5 ರಷ್ಟು ಪುರುಷರಿದ್ದಾರೆ. ಒಂದು ವೇಳೆ ಕುಟುಂಬದ ಮುಖ್ಯಸ್ಥರು ಬ್ಯಾಂಕ್ ಖಾತೆ ಹೊಂದಿಲ್ಲವಾದಲ್ಲಿ, ಕುಟುಂಬದ ಇತರ ಸದಸ್ಯರ ಖಾತೆಗೆ ಹಣ ಜಮೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…