Featured

ಅನ್ನಭಾಗ್ಯ ಯೋಜನೆಯ ಹಣ ನಾಳೆಯಿಂದಲೇ ಜಮೆ ಮಾಡಲು ಸಾಧ್ಯವಿಲ್ಲ : ಜ್ಞಾನೇಂದ್ರ – Vishwanews24

ಅನ್ನಭಾಗ್ಯ ಯೋಜನೆಯ ಹಣ ನಾಳೆಯಿಂದಲೇ ಜಮೆ ಮಾಡಲು ಸಾಧ್ಯವಿಲ್ಲ : ಜ್ಞಾನೇಂದ್ರ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಹಣವನ್ನು ಖಾತೆಗೆ ಜಮೆ ಮಾಡಲು ಇನ್ನು 10-15 ದಿನಗಳ ಕಾಲ ಸಮಯ ಬೇಕಾಗುತ್ತದೆ ಹಾಗಾಗಿ ನಾಳೆಯಿಂದಲೇ ಹಣ ಜಮೆ ಮಾಡಲು ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೊದಲಿಗೆ ಸಮಗ್ರವಾಗಿ ದಾಖಲೆಗಳನ್ನು ಸಂಗ್ರಹಿಸಬೇಕಿದ್ದು, ನಮ್ಮಲ್ಲಿ ಒಟ್ಟು 1.78 ಕೋಟಿ ರೇಷನ್‌ ಕಾರ್ಡ್‌ಗಳಿವೆ. ಅವುಗಳಲ್ಲಿ 1.28 ಕೋಟಿ ಬಿಪಿಎಲ್‌ ಕಾರ್ಡ್‌ದಾರರು ಇದ್ದಾರೆ. ಈ ಪೈಕಿ 1.22 ಕೋಟಿ ಕಾರ್ಡ್‌ಗಳಲ್ಲಿ ಕನಿಷ್ಠ ಕುಟುಂಬದ ಒಬ್ಬರಾದರೂ ಬ್ಯಾಂಕ್‌ ಖಾತೆ ಹೊಂದಿದ್ದಾರೆ. ಇನ್ನುಳಿದ 6 ಲಕ್ಷ ಕಾರ್ಡ್‌ಗಳಲ್ಲಿ ಸಮಸ್ಯೆಯಾಗಿದೆ ಎಂದರು.

ಇನ್ನು ಕೆಲವರು ಬ್ಯಾಂಕ್‌ ಖಾತೆ ಹೊಂದಿದ್ದರೆ, ಆಧಾರ್‌ ಲಿಂಕ್‌ ಆಗಿಲ್ಲ. ಆಧಾರ್‌ ಲಿಂಕ್‌ ಆಗಿದ್ದರೆ ಬ್ಯಾಂಕ್‌ ಖಾತೆ ಆಕ್ಟೀವ್‌ ಆಗಿಲ್ಲ. ಈ ರೀತಿಯ ಸಮಸ್ಯೆಗಳು ಕಂಡುಬಂದಿರುವುದರಿಂದ ಜೂನ್ 1ರಿಂದ ಎಲ್ಲರ ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡೋದು ಕಷ್ಟ ಎಂದಿದ್ದಾರೆ.

ಶೇ.94.6 ಪಡಿತರ ಚೀಟಿಯಲ್ಲಿ ಮಹಿಳೆಯರೇ ಕುಟುಂಬದ ಮುಖ್ಯಸ್ಥರಿದ್ದು, ಶೇ.5 ರಷ್ಟು ಪುರುಷರಿದ್ದಾರೆ. ಒಂದು ವೇಳೆ ಕುಟುಂಬದ ಮುಖ್ಯಸ್ಥರು ಬ್ಯಾಂಕ್‌ ಖಾತೆ ಹೊಂದಿಲ್ಲವಾದಲ್ಲಿ, ಕುಟುಂಬದ ಇತರ ಸದಸ್ಯರ ಖಾತೆಗೆ ಹಣ ಜಮೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

11 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

12 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

12 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

12 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

12 hours ago