Featured

ಅನ್ನಭಾಗ್ಯ ಯೋಜನೆ: ಫೆಬ್ರವರಿ ತಿಂಗಳಿಂದ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ : ಕೆ.ಹೆಚ್​ ಮುನಿಯಪ್ಪ – vishwanews24

ಅನ್ನಭಾಗ್ಯ ಯೋಜನೆ : ಫೆಬ್ರವರಿಯಿಂದ ಹಣದ ಬದಲು 10 ಕೆಜಿ ಅಕ್ಕಿ : ಕೆ.ಹೆಚ್​ ಮುನಿಯಪ್ಪ

ಬೆಂಗಳೂರು : ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದು, ಇದೇ ತಿಂಗಳಿನಿಂದ ಫೆಬ್ರುವರಿಯಿಂದ ನೀಡುತ್ತಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳಿಂದಲೇ ಅಕ್ಕಿಯನ್ನ ಗ್ರಾಹಕರಿಗೆ ಕೊಡುತ್ತಿದ್ದೇವೆ. ನಮಗೆ ಬೇಕಾಗಿರುವ 5 ಕೆಜಿ ಅಕ್ಕಿಯನ್ನು ಕೊಡಲು ಕೇಂದ್ರ ಸರ್ಕಾರವು ಒಪ್ಪಿಗೆ ಕೊಟ್ಟಿದೆ. ಪ್ರತಿ ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ ಎಂದು ಹೇಳಿದರು.

ನಮ್ಮ ಇಲಾಖೆ ಅಧಿಕಾರಿಗಳು ಬರೆದ ಪತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೂಡ ಸ್ಪಂದಿಸಿದ್ದಾರೆ. ಈಗ ಕೇಂದ್ರ ಸಚಿವರು ಅಕ್ಕಿ‌ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ಡಿಬಿಟಿ ಮೂಲಕ ಹಾಕುತ್ತೇವೆ. ಫೆಬ್ರುವರಿಯಿಂದ 10 ಕೆಜಿ ಅಕ್ಕಿ ಕೊಡುವ ತೀರ್ಮಾನ ಮಾಡಿದ್ದೇವೆ ಎಂದರು.

ಕೆಂದ್ರ ಸರ್ಕಾರ ಮೊದಲು ಒಂದು ಕೆಜಿ ಅಕ್ಕಿಗೆ 28 ರೂ. ನಿಗದಿಪಡಿಸಿತ್ತು. ಜನವರಿಯಿಂದ ಪ್ರತಿ ಕೆಜಿಗೆ 22.50 ರೂ ನಂತೆ ಕೊಡಲು ನಿರ್ಧರಿಸಿದೆ. ದರ ಪರಿಷ್ಕರಣೆ‌ ಹಿನ್ನೆಲೆಯಲ್ಲಿ ‌ಮೂರು ತಿಂಗಳು ಹಣ ಹಾಕಿಲ್ಲ. ಒಂದು ವಾರದೊಳಗೆ ಸಕಾಲದಲ್ಲಿ ಹಣ ಹಾಕುತ್ತೇವೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ಡಿಬಿಟಿ ಮೂಲಕ ಹಾಕುತ್ತೇವೆ ಎಂದು ಭರವಸೆ ನೀಡಿದರು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

39 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

1 hour ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

1 hour ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago