Featured

ಅನ್ ಲಾಕ್ 3.0 ಪ್ರಕಟ : ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ..ನೈಟ್ ಕರ್ಫ್ಯೂ ಮುಂದುವರಿಕೆ -Vishwanews24

ಅನ್ ಲಾಕ್ 3.0 ಪ್ರಕಟ:

ಥಿಯೇಟರ್, ಪಬ್ ಅವಕಾಶವಿಲ್ಲ..

ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ..

ನೈಟ್ ಕರ್ಫ್ಯೂ ಮುಂದುವರಿಕೆ..

ಬೆಂಗಳೂರು: ಇನ್ನು ಮುಂದೆ ವೀಕೆಂಡ್ ಕರ್ಫ್ಯೂ ಇರಲ್ಲ. ಸಭೆ ಸಮಾರಂಭಕ್ಕೆ ಅವಕಾಶ ಇಲ್ಲ. ಜುಲೈ 5ರಿಂದ ರಿಂದ 19ರವರೆಗೆ ಅನ್ ಲಾಕ್ ಜಾರಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹ ಸಮಿತಿಯ ಶಿಫಾರಸ್ಸಿನಂತೆ, ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೂರನೇ ಅನ್ ಲಾಕ್ ಘೋಷಣೆ ಮಾಡಿದರು. ಸರ್ಕಾರಿ, ಖಾಸಗಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆಗಳು, ಮಾಲ್ ಗಳಿಗೆ ಅನುಮತಿ, ಮೇಟ್ರೋ, ಕಾರ್ಮಿಕ ಕಾರ್ಯಗಳಿಗೆ ಅವಕಾಶ ನೀಡಲಾಗಿದೆ ಎಂದರು.

ಯಾವುದಕ್ಕೆಲ್ಲ ವಿನಾಯ್ತಿ:

1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

2. ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.

5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

9. ಕೊರೋನಾ ಕಫ್ರ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

10. ವಾರಾಂತ್ಯದ ಕಫ್ರ್ಯೂ ಜಾರಿಯಲ್ಲಿರುವುದಿಲ್ಲ.

11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.

13. ಪಬ್ ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

15. ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.

16. ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ಸಿಎಂ ವಿನಂತಿಸಿದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

13 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

13 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

14 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

14 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

14 hours ago