ಬೆಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಅವರ ಮಿದುಳು ನಿಷ್ಕ್ರಿಯಗೊಂಡಿದ್ದು, ಕೋಮಾ ಹಂತ ತಲುಪಿದ್ದಾರೆ ಎಂದು ತಿಳಿದುಬಂದಿದೆ.
ಹೊಸಕೆರೆಹಳ್ಳಿ ಬಳಿ 4 ದಿನಗಳ ಹಿಂದೆ ಕಾರಲ್ಲಿ ಹೋಗಿದ್ದ ವೇಳೆ ರಸ್ತೆ ಅಪಘಾತ ನಡೆದಿತ್ತು. ಈ ವೇಳೆ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಆದರೆ ಮತ್ತೆ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆಯಲ್ಲಿ ಬ್ಯಾಂಕ್ ಕಾಲೋನಿಯಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಕನ್ನಡ ಚಿತ್ರರಂಗಕ್ಕೆ ಶಿವರಾಂ ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದಾರೆ. ಹಲವಾರು ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅವರು ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲಿ ಅಭಿನಯಿಸಿದ್ದಾರೆ. 6 ದಶಕಗಳಿಗೂ ಹೆಚ್ಚು ಕಾಲ ಅವರಿಗೆ ಬಣ್ಣದ ಲೋಕದಲ್ಲಿ ಅನುಭವವಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…