Featured

ಅಪಘಾತದಲ್ಲಿ ಗಾಯಗೊಂಡ ಮಧುವಿಗೆ ಐಸಿಯುನಲ್ಲೇ ತಾಳಿ ಕಟ್ಟಿದ ವರ – vishwanews24

ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತ : ಐಸಿಯುನಲ್ಲೇ ತಾಳಿ ಕಟ್ಟಿದ ವರ

ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ  ಕೊಚ್ಚಿಯಲ್ಲಿ ನಡೆದಿದೆ.

ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ  ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು. ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ ಬೆನ್ನುಮೂಳೆಗೆ ತೀವ್ರ ಗಾಯವಾಗಿ ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಗೆ  ದಾಖಲಾಗಿದ್ದಾರೆ.

ಆಸ್ಪತ್ರೆಗೆ ಬಂದ ಶರೋನ್ ಹಾಗೂ ಅವನಿ ಕುಟುಂಬಸ್ಥರು ಪೂರ್ವ ನಿಗದಿಯಾಗಿದ್ದಂತೆ ಶುಕ್ರವಾರ ಮಧ್ಯಾಹ್ನ 12:15 ರಿಂದ 12:30ರ ನಡುವೆ ಮದುವೆ ನೆರವೇರಿಸಲು ಅವಕಾಶ ಕಲ್ಪಿಸುವಂತೆ ಆಸ್ಪತ್ರೆಯವರಲ್ಲಿ ಮನವಿ ಮಾಡಿದ್ದರು. ಅದರಂತೆ ಆಸ್ಪತ್ರೆಯ ಐಸಿಯುನಲ್ಲೇ ಶರೋನ್ ಅವನಿ ಕುತ್ತಿಗೆಗೆ ತಾಳಿ ಕಟ್ಟಿದ್ದಾರೆ. ಕುಟುಂಬ ಸದಸ್ಯರು ಈ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago