ಲಖನೌ: ಉತ್ತರ ಪ್ರದೇಶದಲ್ಲೊಬ್ಬ ವ್ಯಕ್ತಿಯು, ಅಪಘಾತದಲ್ಲಿ ಪತ್ನಿ ತೀರಿಕೊಂಡ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್‌ನೋಟ್ ಬರೆದಿರುವ ಆತ, “ನಾವು ಇದ್ದರೂ ಜತೆಗೇ, ಸತ್ತರೂ ಜತೆಗೇ” ಎಂಬುದಾಗಿ ಬರೆದಿದ್ದಾರೆ.
ಆರು ತಿಂಗಳ ಹಿಂದೆ 36 ವರ್ಷದ ಯೋಗೇಶ್ ಕುಮಾರ್ ಹಾಗೂ 28 ವರ್ಷದ ಮಣಿಕರ್ಣಿಕಾ ಕುಮಾರಿ ಮದುವೆಯಾಗಿದ್ದರು. ಇಬ್ಬರೂ ಉತ್ತರ ಪ್ರದೇಶದ ಹರ್ದೋಯಿಯಲ್ಲಿ ನೆಲೆಸಿದ್ದರು. ಮಣಿಕರ್ಣಿಕಾ ಕುಮಾರಿ ನರ್ಸ್ ಆಗಿದ್ದರು. ಯೋಗೇಶ್ ಕುಮಾರ್ ಟೀಚರ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರ ದಾಂಪತ್ಯವೂ ಸುಮಧುರವಾಗಿತ್ತು. ಆದರೆ, ಕಳೆದ ಸೋಮವಾರ (ಏಪ್ರಿಲ್ 22) ಮಣಿಕರ್ಣಿಕಾ ಕುಮಾರಿ ಅವರು ತಡಿಯಾವಾಣ ಆರೋಗ್ಯ ಕೇಂದ್ರಕ್ಕೆ ತೆರಳುವಾಗ ಅಪರಿಚಿತ ವಾಹನವು ಮಣಿಕರ್ಣಿಕಾ ಕುಮಾರಿ ಅವರ ಸ್ಕೂಟಿಗೆ ಡಿಕ್ಕಿಯಾಗಿತ್ತು.
ಲಖನೌ-ಹರ್ದೋಯಿ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಣಿಕರ್ಣಿಕಾ ಕುಮಾರಿ ಮೃತಪಟ್ಟಿದ್ದರು. “ಸುರ್ಸಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಮಣಿಕರ್ಣಿಕಾ ಕುಮಾರಿ ಅವರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಇದಾದ ಬಳಿಕ ಅವರು ಮೃತಪಟ್ಟಿದ್ದರು. ಮಣಿಕರ್ಣಿಕಾ ಅವರ ಕಚೇರಿಯ ಗುರುತಿನ ಚೀಟಿ ಆಧಾರದ ಮೇಲೆ ಅವರ ಪತಿಗೆ ಕರೆ ಮಾಡಿ ವಿಷಯ ತಿಳಿಸಲಾಯಿತು” ಎಂದು ಸುರ್ಸಾ ಎಸ್‌ಎಚ್‌ಒ ಇಂದ್ರೇಶ್ ಕುಮಾರ್ ಯಾದವ್ ಮಾಹಿತಿ ನೀಡಿದ್ದಾರೆ.
ಡೆತ್‌ನೋಟ್‌ನಲ್ಲಿ ಏನಿದೆ?
ಪತ್ನಿಯ ಸಾವಿನಿಂದ ನೊಂದ ಪತಿಯು ಮನೆಗೆ ಬಂದವರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಬಳಿ ಡೆತ್‌ನೋಟ್ ಪತ್ತೆಯಾಗಿದ್ದು, “ನಾವು ಇದ್ದರೂ ಜತೆಯಾಗಿಯೇ, ಸತ್ತರೂ ಜತೆಯಾಗಿಯೇ” ಎಂಬುದಾಗಿ ಬರೆದಿದ್ದಾರೆ. ಪತ್ನಿಯ ವಸ್ತುಗಳನ್ನು ಮನೆಗೆ ತೆಗೆದುಕೊಂಡು ಹೋದ ಯೋಗೇಶ್ ಕುಮಾರ್ ಬಾಗಿಲು ಹಾಕಿಕೊಂಡಿದ್ದಾರೆ. ಎಷ್ಟು ಹೊತ್ತಾದರೂ ಬಾಗಿಲು ತೆರೆಯದ ಕಾರಣ ಪಕ್ಕದ ಮನೆಯವರು ಹೋಗಿ ನೋಡಿದಾಗ ಯೋಗೇಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…