ಬೆಂಗಳೂರು: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಉತ್ತರ ಪ್ರದೇಶದ ಬಳಿ ಅಪಘಾತದಲ್ಲಿ ಬೀದರ್‌ನ ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದು, 8 ಜನರು ಗಾಯಗೊಂಡಿರುವ ಸುದ್ದಿ ತಿಳಿದು ಆಘಾತವಾಯಿತು. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥವ ಶರೀರವನ್ನು ಬೀದರ್‌ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಕರ್ನಾಟಕದವರಾದ ಚನ್ನಪ್ಪ ಎಂಬ ಅಧಿಕಾರಿಯಿದ್ದು ಅವರೊಂದಿಗೆ ಮಾತನಾಡಿ, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳ ಕುಟುಂಬಕ್ಕೆ ಸೂಕ್ತ ನೆರವು ದೊರಕಿಸಲು ತಿಳಿಸಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…