Featured

ಅಪಘಾತದಲ್ಲಿ ಬೀದರ್ ಯಾತ್ರಿಕರ ದುರ್ಮರಣ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಖಂಡ್ರೆ – vishwanews24

ಬೀದರ್ ಕುಂಭಮೇಳಕ್ಕೆ ತೆರಳುತ್ತಿದ್ದ ಯಾತ್ರಿಕರ ದುರ್ಮರಣ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಖಂಡ್ರೆ

ಬೆಂಗಳೂರು: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಉತ್ತರ ಪ್ರದೇಶದ  ಬಳಿ ಅಪಘಾತದಲ್ಲಿ ಬೀದರ್‌ನ ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ  5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದು, 8 ಜನರು ಗಾಯಗೊಂಡಿರುವ ಸುದ್ದಿ ತಿಳಿದು ಆಘಾತವಾಯಿತು. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥವ ಶರೀರವನ್ನು ಬೀದರ್‌ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಕರ್ನಾಟಕದವರಾದ ಚನ್ನಪ್ಪ ಎಂಬ ಅಧಿಕಾರಿಯಿದ್ದು ಅವರೊಂದಿಗೆ ಮಾತನಾಡಿ, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳ ಕುಟುಂಬಕ್ಕೆ ಸೂಕ್ತ ನೆರವು ದೊರಕಿಸಲು ತಿಳಿಸಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago