Featured

ಅಪಘಾತದಲ್ಲಿ ಸಾವಿಗೀಡಾದ ನಟಿ ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ – vishwanews24

ಅಪಘಾತದಲ್ಲಿ ಸಾವಿಗೀಡಾದ ನಟಿ ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ

ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್​ ಅವರು ರಸ್ತೆ ಅಪಘಾತದಲ್ಲಿ ನಿಧನರಾದರು. ಈಗ ಇನ್ನೊಂದು ಶಾಕಿಂಗ್​ ಸುದ್ದಿ ಕೇಳಿಬಂದಿದೆ. ಪವಿತ್ರಾ ಜಯರಾಮ್​ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು  ಅವರು ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್​ ಜೊತೆ ಚಂದು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್​ನಲ್ಲಿ ಆತ್ಮಹತ್ಯೆ  ಮಾಡಿಕೊಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ತೆಲುಗಿನ ಹಲವು ಧಾರಾವಾಹಿಗಳಲ್ಲಿ ಚಂದು ನಟಿಸುತ್ತಿದ್ದರು. ಇತ್ತೀಚೆಗೆ ಅವರು ಪವಿತ್ರಾ ಜಯರಾಮ್​ ಜೊತೆ ಬೆಂಗಳೂರಿಗೆ ಬಂದಿದ್ದರು. ಸಿನಿಮಾವೊಂದಕ್ಕೆ ಸಹಿ ಮಾಡಿದ ಬಳಿಕ ಅವರು ಪುನಃ ಹೈದರಾಬಾದ್​ಗೆ ಹಿಂದಿರುಗುವಾಗ ಕಾರು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಚಂದುಗೆ ಪೆಟ್ಟಾಗಿತ್ತು. ಅದನ್ನು ನೋಡಿ ಗಾಬರಿಗೊಂಡ ಪವಿತ್ರಾ ಅವರ ಉಸಿರು ನಿಂತುಹೋಗಿತ್ತು. ಆ ದುರಂತದ ನೆನಪು ಮಾಸುವುದಕ್ಕೂ ಮುನ್ನವೇ ಚಂದು ನಿಧನರಾಗಿದ್ದಾರೆ.

ಹೈದರಾಬಾದ್​​​ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. 2015ರಲ್ಲಿ ಶಿಲ್ಪಾಳನ್ನು ಪ್ರೀತಿಸಿ ಚಂದು ಮದುವೆ ಆಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ನಟಿ ಪವಿತ್ರಾ ಜಯರಾಮ್​ ಅವರ ಸಾವಿನಿಂದ ಮನನೊಂದು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೈದರಾಬಾದ್​ನ ನಾರಸಿಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಜನಪ್ರಿಯ ‘ತ್ರಿನಯನಿ’ ಧಾರಾವಾಹಿಯಲ್ಲಿ ಚಂದು ಹಾಗೂ ಪವಿತ್ರಾ ಜಯರಾಮ್​ ಅವರು ಒಟ್ಟಿಗೆ ನಟಿಸುತ್ತಿದ್ದರು. ಪವಿತ್ರಾ ನಿಧನದ ಬಳಿಕ ಈ ಧಾರಾವಾಹಿ ತಂಡದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿತ್ತು. ಈಗ ಚಂದು ಕೂಡ ನಿಧನರಾಗಿರುವುದರಿಂದ ಎಲ್ಲರಿಗೂ ಆಘಾತ ಆಗಿದೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago