ಅಮರಾವತಿ: ಅಪರಿಚಿತ ನಂಬರ್‌ನಿಂದ ಬಂದ ವಾಟ್ಸಾಪ್ ಮೆಸೇಜ್‌ನಿಂದ ಶಿಕ್ಷಿಯೊಬ್ಬರು 21 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈಲ್ಲಿನ ಅನ್ನಮಯ್ಯ ಜಿಲ್ಲೆಯ ನಿವಾಸಿಯಾಗಿರುವ ಶಿಕ್ಷಕಿ ವರಲಕ್ಷಿ ಅವರೇ 21 ಲಕ್ಷ ಕಳೆದುಕೊಂಡಿರುವವರು. ತನ್ನ ಮೊಬೈಲ್‌ಗೆ ಬಂದ ಒಂದೇ ಒಂದು ವಾಟ್ಸಾಪ್ ಲಿಂಕ್ ಸಂದೇಶದಿಂದ ಹಣ ಕಳೆದುಕೊಂಡು ಬಳಿಕ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಹಣ ಕಳೆದುಕೊಂಡಿದ್ದು ಹೇಗೆ?
ಅಪರಿಚಿತ ಮೊಬೈಲ್ ಸಂಖ್ಯೆಯಿಂದ ತನ್ನ ವಾಟ್ಸಾಪ್‌ಗೆ ಲಿಂಕ್‌ನೊಂದಿಗೆ ಮೆಸೇಜ್ ಬಂದಿದೆ. ಹಲವು ಬಾರಿ ಸಂದೇಶಗಳನ್ನು ಸ್ವೀಕರಿಸಿದ್ದಾರೆ, ಅಂದಿನಿಂದಲೇ ಆಕೆಯ ಫೋನ್ ಹ್ಯಾಕ್ ಆಗಿದೆ. ವರಲಕ್ಷ್ಮೀ ಅವರು ಲಿಂಕ್ ಕ್ಲಿಕ್ ಮಾಡಿದ ಬಳಿಕ ಫೋನ್ ಸಂಪೂರ್ಣ ಹ್ಯಾಕ್ ಆಗಿದ್ದು, ಸೈಬರ್ ಕಿರಾತಕರು ಈಕೆಯ ಖಾತೆಯಿಂದಲೇ ವಹಿವಾಟು ನಡೆಸಿದ್ದಾರೆ. 20,000, 40,000 ಮತ್ತು 80,000 ದಂತೆ ಖಾತೆಯಿಂದ ಹಣ ಕಡಿಗೊಳ್ಳುತ್ತಾ ಹೋಗಿದೆ. ಹೀಗೆ ಒಟ್ಟು 21 ಲಕ್ಷ ರೂಪಾಯಿ ಪಂಗನಾಮ ಹಾಕಿದ್ದಾರೆ. ಅಲ್ಲದೇ ಮದನಪಲ್ಲಿಯ ಉದ್ಯೋಗಿ ಜ್ಞಾನ ಪ್ರಕಾಶ್ ಅವರಿಂದಲೂ 12 ಲಕ್ಷ ರೂಪಾಯಿ ಸೈಬರ್ ಕಳ್ಳರ ಪಾಲಾಗಿದೆ.
ಈ ಸಂಬಂಧ ವರಲಕ್ಷ್ಮೀ ಅವರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…