ರಾಮನಗರ: ಅಸ್ಸಾಂನಲ್ಲಿ ಅಪರೇಷನ್ ಕಮಲದ ಭೀತಿ ಹಿನ್ನೆಲೆಯಲ್ಲಿ, ಅಲ್ಲಿನ 10 ಮಂದಿ ಕಾಂಗ್ರೆಸ್ ಶಾಸಕರನ್ನು ರಾಮನಗರದ ಬಿಡದಿ ಸಮೀಪದ ವಂಡರ್ ಲಾ ಹಾಗೂ ಈಗಲ್ ಟನ್ ರೆಸಾರ್ಟ್ಗಳಿಗೆ ಕರೆತರಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ಶಾಸಕರನ್ನು ಇಲ್ಲಿಗೆ ಶಿಫ್ಟ್ ಮಾಡಲಾಗಿದೆ ಎನ್ನಲಾಗಿದೆ.
ಅಸ್ಸಾಂ ಶಾಸಕರ ಗುರುವಾರ ತಡರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ, ಕಾಂಗ್ರೆಸ್ ಮುಖಂಡರು ಶಾಸಕರನ್ನು 8 ಇನ್ನೋವಾ ಕಾರುಗಳಲ್ಲಿ ವಂಡರ್ ಲಾ ಹಾಗೂ ಈಗಲ್ ಟನ್ ರೆಸಾರ್ಟ್ಗೆ ಕರೆ ತಂದಿದ್ದಾರೆ. ರೆಸಾರ್ಟ್ಗೆ ಬಂದ ಶಾಸಕರನ್ನು ಹೂ ಹಾರ ಹಾಕಿ ಸ್ವಾಗತಿಸಿದ ಸ್ಥಳೀಯ ಕಾಂಗ್ರೆಸ್ ಮುಖಂಡರು ವಿಶ್ರಾಂತಿ ಪಡೆಯಲು ಅವರಿಗೆ ಮೊದಲೇ ಕಾಯ್ದಿರಿಸಿದ ಕೊಠಡಿಗಳಿಗೆ ಕಳುಹಿಸಿದ್ದಾರೆ.
ಇದನ್ನೂ ಓದಿ:👇
ರೆಸಾರ್ಟ್ ಸುತ್ತ ಸ್ಥಳೀಯ ಪೊಲೀಸರಿಂದ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಡಿ.ಕೆ.ಶಿವಕುಮಾರ್ ಆಪ್ತ ಕಾಂಗ್ರೆಸ್ ಮುಖಂಡರಿಗೆ ಮಾತ್ರ ರೆಸಾರ್ಟ್ಗೆ ಪ್ರವೇಶವಿದ್ದು, ಬೇರೆ ಯಾರೂ ಸುಳಿಯದಂತೆ ಎಚ್ಚರಿಕೆ ವಹಿಸಲಾಗಿದೆ.*
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…