ಮಂಗಳೂರು: ಯುದ್ದಪೀಡಿತ ಉಕ್ರೇನ್ ದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ನಡೆಸುತ್ತಿರುವ ಕೇಂದ್ರ ಸರಕಾರ ಕೈಗೊಂಡಿರುವ ಕಾರ್ಯಾಚರಣೆ “ಆಪರೇಷನ್ ಗಂಗಾ ” ದಲ್ಲಿ ಮಂಗಳೂರು ಮೂಲದ ಪೈಲಟ್ ಕ್ಯಾ. ಮೈಕಲ್ ಸಲ್ದಾನ್ಹ ಕಾರ್ಯನಿರ್ವಹಿಸುತ್ತಿದ್ದಾರೆ.
ಮೈಕಲ್ ಅವರು ರೊಮೇನಿಯಾದ ಬುಕಾರೆಸ್ಟ್‌ನಿಂದ ಮುಂಬೈಗೆ 182 ವಿದ್ಯಾರ್ಥಿಗಳನ್ನು ಹೊತ್ತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಪೈಲಟ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಹಂಗೇರಿಯ ಬುಡಾಪೆಸ್ಟ್‌ನಿಂದ 185 ವಿದ್ಯಾರ್ಥಿಗಳನ್ನು ಕರೆ ತಂದಿದ್ದ ವಿಮಾನಕ್ಕೆ ಕುವೈತ್ ನಿಂದ ಮುಂಬೈವರೆಗೆ ಪೈಲಟ್ ಆಗಿದ್ದರು.
ಬುಡಾಪೆಸ್ಟ್, ಬುಕಾರೆಸ್ಟ್ ಭಾಗಕ್ಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮೊದಲ ಬಾರಿಗೆ ತೆರಳಿದೆ. ದಟ್ಟ ಹಿಮ, ಬೆಟ್ಟ ಗುಡ್ಡ ಪ್ರದೇಶಗಳಿಂದ ಕೂಡಿದ ದೇಶದಲ್ಲಿ ವಿಮಾನ ಚಾಲನೆಯು ಸವಾಲಾಗಿ ಪರಿಣಮಿಸಿತ್ತು. ಆದಾಗ್ಯೂ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಲುಪಿಸಿದ ಬಗ್ಗೆ ಹೆಮ್ಮೆಯಿದೆ ಎಂದು ಮೈಕಲ್ ತಿಳಿಸಿದ್ದಾರೆ
ಮೈಕಲ್ ಅವರು ಕೊರೊನಾ ಆರಂಭ ದಿನಗಳಲ್ಲಿ 2020ರ ಮೇ 7ರಂದು ‘ವಂದೇ ಮಾತರಂ’ ಕಾರ್ಯಾಚರಣೆಯಲ್ಲಿಯೂ ಪಾಲ್ಗೊಂಡು ದುಬೈನಿಂದ ಭಾರತೀಯರನ್ನು ಕರೆ ತಂದಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…