ನವದೆಹಲಿ: ಪ್ರಜಾಪ್ರಭುತ್ವದ ಮೌಲ್ಯಗಳೊಡನೆ ರಾಜಿ ಮಾಡಿಕೊಳ್ಳುವ ಅಪಾಯಕಾರಿ ಆಡಳಿತದಿಂದ ದೇಶವನ್ನು ರಕ್ಷಿಸುವ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದು ಪಕ್ಷದ ಮಾಜಿ ಅಧ್ಯಕ್ಷೆ, ಹಿರಿಯ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಸೋನಿಯಾ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.
ದೇಶದ ಬಡಜನತೆ ಭಯ ಹಾಗೂ ಹತಾಶೆಯ ಜೀವನ ನಡೆಸುವ ವಾತಾವರಣ ನಿರ್ಮಾಣವಾಗಿದೆ. ಈ ಕುರಿತಂತೆ ಕಾಂಗ್ರೆಸ್ ಎಚ್ಚರ ವಹಿಸಬೇಕಿದೆ ಎಂದ ಸೋನಿಯಾ, ಅಧಿಕಾರಕ್ಕಾಗಿ ಸಮಾಜದಲ್ಲಿ ದ್ವೇಷ ಬಿತ್ತುತ್ತಿರುವ ಬಿಜೆಪಿಯನ್ನು ಸೋಲಿಸುವ ಜವಾಬ್ದಾರಿಯನ್ನು ಪಕ್ಷ ಹೊರಬೇಕು ಎಂದು ಹೇಳಿದರು,
ಪ್ರಧಾನಿ ನರೇಂದ್ರ ಮೋದಿ ಅವರ ವಾಕ್ಚಾತುರ್ಯವು ಕೇಂದ್ರ ಸರ್ಕಾರದ ಪತನ ಪ್ರಾರಂಭವಾಗಿರುವುದನ್ನು ಸೂಚಿಸಿದೆ. ಅಲ್ಲದೆ ಅದು ತನ್ನ ಹತಾಶ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ. ನಾವು ಒಗ್ಗಟ್ಟಾಗಿ ಕೆಲಸ ಮಾಡಲು ಬದ್ದವಾಗಿದ್ದೇವೆ. ಪ್ರಜಾಪ್ರಭುತ್ವವನ್ನು ರಕ್ಷಿಸುವ ಕೆಲಸಕ್ಕೆ ನಾವು ರಾಹುಲ್ ಅವರೊಂದಿಗೆ ಕೈಜೋಡಿಸುತ್ತೇವೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…