Featured

ಅಪಾಯಕಾರಿ ಶ್ವಾನ ತಳಿಗಳ ನಿಷೇಧಿಸಿದ ಕೇಂದ್ರದ ಕ್ರಮಕ್ಕೆ ಹೈಕೋರ್ಟ್​ ಮಧ್ಯಂತರ ತಡೆ – Vishwanews24

ಅಪಾಯಕಾರಿ ಶ್ವಾನ ತಳಿಗಳ ಮೇಲಿನ ನಿಷೇಧಿಸಿದ ಕೇಂದ್ರದ ಕ್ರಮಕ್ಕೆ ಹೈಕೋರ್ಟ್​ ಮಧ್ಯಂತರ ತಡೆ

ಬೆಂಗಳೂರು: ಶ್ವಾನಗಳಲ್ಲಿಯೇ ಅತ್ಯಂತ ಅಪಾಯಕಾರಿ ಮತ್ತು ಕ್ರೂರವಾಗಿರುವ ತಳಿಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರಕಾರ ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕಕ್ಕೆ ಸೀಮಿತವಾಗಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ‌.

ಬೆಂಗಳೂರು ವಾಸಿ ಕಿಂಗ್​​ ಸೋಲ್ಮನ್​ ಡೇವಿಡ್​​ ಮತ್ತು ಮರ್ಡೋನಾ ಜಾನ್​ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಮಧ್ಯಂತರ ಆದೇಶ ನೀಡಿದೆ. ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, ಮನುಷ್ಯನ ಜೀವಕ್ಕೆ ಅಪಾಯಕಾರಿ ಮತ್ತು ಉಗ್ರವಾಗಿ ವರ್ತಿಸುವ ತಳಿಯ ಶ್ವಾನಗಳನ್ನು ಗುರುತಿಸುವುದಕ್ಕೆ ಆಳವಾದ ಅಧ್ಯಯನದ ಅಗತ್ಯವಿದೆ. ಆದರೆ, ಸುತ್ತೋಲೆಯಲ್ಲಿ ಉಲ್ಲೇಖಿಸದ ಹಲವು ತಳಿಗಳು ಕ್ರೂರ ವರ್ಗಕ್ಕೆ ಸೇರಲಿವೆ ಎಂದು ಕೋರ್ಟ್ ಗಮನಕ್ಕೆ ತಂದರು.

 

ಈ ವೇಳೆ ಕೇಂದ್ರ ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸೇಟರ್ ಜನರಲ್, ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ವೇಳೆ ದಿಲ್ಲಿ ನ್ಯಾಯಾಲಯ ಈ ಸಂಬಂಧ ನಿರ್ದೇಶನ ನೀಡಿದೆ. ಅಲ್ಲದೆ, ಕೇಂದ್ರ ಸರಕಾರ ಸಂಬಂಧಪಟ್ಟವರೊಂದಿಗೆ ಚರ್ಚೆ ನಡೆಸಬೇಕು. ಅರ್ಜಿದಾರರ ಮನವಿಯನ್ನು ಪರಿಗಣಿಸಿ ಆದೇಶದ ಪ್ರತಿ ಲಭ್ಯವಾದ ಮೂರು ತಿಂಗಳೊಳಗೆ ಈ ಕುರಿತಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದೆ

ಕ್ರೂರ ಹಾಗೂ ಅಪಾಯಕಾರಿ ಶ್ವಾನಗಳ ತಳಿಗಳ (ಅಮೆರಿಕನ್ ಸ್ಟಾಫರ್ಡ್ ಶೈರ್, ಟೆರಿಯರ್, ಡೋಗೋ ಅರ್ಜೆಂಟೇನೋ, ಬುಲ್ ಡಾಗ್, ಕಂಗಲ್, ಸೆಂಟ್ರಲ್ ಏಷ್ಯನ್ ಷಫರ್ಡ್ ಡಾಗ್ ಸೇರಿದಂತೆ ಮಿಶ್ರ ತಳಿಯ ಶ್ವಾನಗಳ) ಸಂತಾನೋತ್ಪತ್ತಿ ನಿಷೇಧಿಸುವ ಸಲುವಾಗಿ ಅವುಗಳ ಮಾಲೀಕರು ಸಂತಾನಹರಣಕ್ಕಾಗಿ ಅಗತ್ಯವಿರವ ಕ್ರಿಮಿನಾಶಕಗಳನ್ನು ಬಳಕೆ ಮಾಡಬೇಕು ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ 2024ರ ಮಾರ್ಚ್ 12ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.

 

ವಾದ ಆಲಿಸಿದ ಹೈಕೋರ್ಟ್, ಕೇಂದ್ರದ ಪರ ವಕೀಲರು ಕೇಂದ್ರ ಸರಕಾರ ಸುತ್ತೋಲೆ ಹೊರಡಿಸುವ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಪರಿಗಣಿಸಿರುವ ಎಲ್ಲ ಅಂಶಗಳಿರುವ ದಾಖಲೆಗಳನ್ನು ಸಲ್ಲಿಸಬೇಕು. ಅಲ್ಲಿಯವರೆಗೂ ಕರ್ನಾಟಕ ರಾಜ್ಯಕ್ಕೆ ಸೀಮಿತವಾಗುವಂತೆ ಸುತ್ತೋಲೆಗೆ ತಡೆ ನೀಡುತ್ತಿರುವುದಾಗಿ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 5ಕ್ಕೆ ಮುಂದೂಡಿದೆ.

Vishwa News 24

Recent Posts

ಸುಳ್ಯ : ಕಾರು-ಬೈಕ್ ಅಪಘಾತ ; ಬೈಕ್ ಸವಾರ ಮೃತ್ಯು -vishwanews24

ಸುಳ್ಯ : ಕಾರು-ಬೈಕ್ ಅಪಘಾತ ; ಬೈಕ್ ಸವಾರ ಮೃತ್ಯು ಸುಳ್ಯ : ಕಾರು ಮತ್ತು ಬೈಕ್ ಅಪಘಾತವಾಗಿ ಬೈಕ್…

1 day ago

ನ.29ರಂದು ಉಡುಪಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ -vishwanews24

ನ.29ರಂದು ಉಡುಪಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ಉಡುಪಿ : ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ…

1 day ago

ಉಡುಪಿ: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ರಾಜೇಶ್ ಕೇಶವ ಆಚಾರ್ಯ ಯುಎಎಇ ಯಿಂದ ಭಾರತಕ್ಕೆ ಗಡಿಪಾರು -vishwanews24

ಉಡುಪಿ: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ರಾಜೇಶ್ ಕೇಶವ ಆಚಾರ್ಯ ಯುಎಎಇ ಯಿಂದ ಭಾರತಕ್ಕೆ ಗಡಿಪಾರು ಮುಂಬೈ ವಿಮಾನ…

1 day ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟ್‌ನಿಂದ ಐವರ ಜಾಮೀನು ರದ್ದು ಅರ್ಜಿ ವಜಾ -vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟ್‌ನಿಂದ ಐವರ ಜಾಮೀನು ರದ್ದು ಅರ್ಜಿ ವಜಾ ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ…

2 days ago

ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳ ಸರಕಾರಿ ಕಚೇರಿಗಳಲ್ಲಿ ತುಳುವಿಗೆ ಅಧಿಕೃತ ಸ್ಥಾನ -vishwanews24

ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳ ಸರಕಾರಿ ಕಚೇರಿಗಳಲ್ಲಿ ತುಳುವಿಗೆ ಅಧಿಕೃತ ಸ್ಥಾನ ಸಾರ್ವಜನಿಕರು ಇನ್ನು ಮುಂದೆ ತುಳು ಭಾಷೆಯಲ್ಲೇ…

2 days ago

ಮಂಗಳೂರು: ನ.30 ರಂದು ಸಂತ ಅಲೋಶಿಯಸ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ -vishwanews24

 ಮಂಗಳೂರು: ನ.30 ರಂದು ಸಂತ ಅಲೋಶಿಯಸ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ ಈಗಾಗಲೇ 10,000ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳ ನೋಂದಣಿ ಮಂಗಳೂರು:…

2 days ago