ಬೆಂಗಳೂರು : ಮಾನವ ಜೀವಕ್ಕೆ ಅಪಾಯಕಾರಿಯಾಗಿರುವ 23ಕ್ಕೂ ಅಧಿಕ ಶ್ವಾನ ತಳಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಈ ಹಿಂದೆ ಆದೇಶ ಹೊರಡಿಸಿತ್ತು. ಆದರೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರಕಾರ ಹೊರಡಿಸಿದ ಆದೇಶವನ್ನು ಬುಧವಾರ ರದ್ದುಗೊಳಿಸಿದೆ.
ಕೆಲ ಶ್ವಾನ ತಳಿ ನಿಷೇಧಕ್ಕೆ ಸಂಬಂಧಪಟ್ಟಂತೆ ಕೇಂದ್ರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೆಲವರು ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಕೇಂದ್ರದ ನಿಷೇಧ ಆದೇಶವನ್ನು ರದ್ದುಗೊಳಿಸಿದೆ. ಕಾಯ್ದೆಯಡಿ ರಚಿಸಿದ ಸಮಿತಿಯ ಶಿಫಾರಸು ಮಾತ್ರ ಗಣನೆಗೆ ತೆಗೆದುಕೊಳ್ಳಬೇಕು. ಈ ರೀತಿಯ ಕ್ರಮಕ್ಕೂ ಮುನ್ನ ಶ್ವಾನ ತಳಿ ಸಂವರ್ಧನಾ ಸಂಘಟನೆಯ ಜೊತೆ ಸಮಾಲೋಚನೆ ನಡೆಸಬೇಕು ಎಂದು ಹೇಳಿದೆ.
ಇನ್ನು ಕೇಂದ್ರವು ಶ್ವಾನ ತಳಿ ನಿಷೇಧಿಸುವ ಆದೇಶ ನೀಡುವ ಮುನ್ನ ಕಾನೂನಿನ ಕ್ರಮ ಅನುಸರಿಸಬೇಕು. ಶ್ವಾನ ಪಾಲಕರ ಮೇಲೆಯೂ ಹೊಣೆನಿಗದಿಪಡಿಸುವ ಅಗತ್ಯವಿದೆ. ಶ್ವಾನ ಕಡಿತಕ್ಕೊಳಗಾದವರಿಗೆ ಚಿಕಿತ್ಸೆ, ನಷ್ಟ ಪರಿಹಾರದಂತಹ ಹೊಣೆ ನಿಗದಿ ಸೂಕ್ತ ಎಂದು ಪೀಠ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…