Featured

ಅಪಾಯಕಾರಿ ಶ್ವಾನ ತಳಿ ನಿಷೇಧ: ಕೇಂದ್ರದ ಆದೇಶ ರದ್ದುಗೊಳಿಸಿದ ಹೈಕೋರ್ಟ್ – vishwanews24

ಅಪಾಯಕಾರಿ ಶ್ವಾನ ತಳಿ ನಿಷೇಧ: ಕೇಂದ್ರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಮಾನವ ಜೀವಕ್ಕೆ ಅಪಾಯಕಾರಿಯಾಗಿರುವ 23ಕ್ಕೂ ಅಧಿಕ ಶ್ವಾನ ತಳಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಈ ಹಿಂದೆ ಆದೇಶ ಹೊರಡಿಸಿತ್ತು. ಆದರೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರಕಾರ ಹೊರಡಿಸಿದ ಆದೇಶವನ್ನು ಬುಧವಾರ ರದ್ದುಗೊಳಿಸಿದೆ.

ಕೆಲ ಶ್ವಾನ ತಳಿ ನಿಷೇಧಕ್ಕೆ ಸಂಬಂಧಪಟ್ಟಂತೆ ಕೇಂದ್ರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೆಲವರು ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಕೇಂದ್ರದ ನಿಷೇಧ ಆದೇಶವನ್ನು ರದ್ದುಗೊಳಿಸಿದೆ. ಕಾಯ್ದೆಯಡಿ ರಚಿಸಿದ ಸಮಿತಿಯ ಶಿಫಾರಸು ಮಾತ್ರ ಗಣನೆಗೆ ತೆಗೆದುಕೊಳ್ಳಬೇಕು. ಈ ರೀತಿಯ ಕ್ರಮಕ್ಕೂ ಮುನ್ನ ಶ್ವಾನ ತಳಿ ಸಂವರ್ಧನಾ ಸಂಘಟನೆಯ ಜೊತೆ ಸಮಾಲೋಚನೆ ನಡೆಸಬೇಕು ಎಂದು ಹೇಳಿದೆ.

ಇನ್ನು ಕೇಂದ್ರವು ಶ್ವಾನ ತಳಿ‌ ನಿಷೇಧಿಸುವ ಆದೇಶ ನೀಡುವ ಮುನ್ನ ಕಾನೂನಿನ ಕ್ರಮ ಅನುಸರಿಸಬೇಕು. ಶ್ವಾನ ಪಾಲಕರ ಮೇಲೆಯೂ ಹೊಣೆ‌ನಿಗದಿಪಡಿಸುವ ಅಗತ್ಯವಿದೆ. ಶ್ವಾನ ಕಡಿತಕ್ಕೊಳಗಾದವರಿಗೆ ಚಿಕಿತ್ಸೆ, ನಷ್ಟ ಪರಿಹಾರದಂತಹ ಹೊಣೆ ನಿಗದಿ ಸೂಕ್ತ ಎಂದು ಪೀಠ ತಿಳಿಸಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

20 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago