Featured

ಅಪ್ಪು ಡ್ರೀಮ್ ಪ್ರೊಜೆಕ್ಟ್  : ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟೀಸರ್ ಬಿಡುಗಡೆ – Vishwanews24

ಅಪ್ಪು ಡ್ರೀಮ್ ಪ್ರೊಜೆಕ್ಟ್  : ‘ಗಂಧದ ಗುಡಿ’ ಟೀಸರ್ ಬಿಡುಗಡೆ – Vishwanews24

ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಹುಟ್ಟುಹಬ್ಬದಂದೆ ದಿ. ನಟ ಪುನೀತ್ ರಾಜ್‍ಕುಮಾರ್‌ ಅವರ ಕನಸಿನ ಗಂಧದಗುಡಿ‌ ಸಾಕ್ಷ್ಯಚಿತ್ರದ ಟೈಟಲ್​ ಟೀಸರ್ ರಿಲೀಸ್ ಆಗಿದೆ.

ನ.1ರಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅದರ ಟೈಟಲ್​ ಟೀಸರ್​ ಲಾಂಚ್​ ಮಾಡಬೇಕು ಎಂಬುದು ಅವರ ಪುನೀತ್‌ ಅವರ ಕನಸಾಗಿತ್ತು. ಆದರೆ ಅದಕ್ಕೂ ಮುನ್ನವೇ ಅವರು ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಇಂದು (ಡಿ.6) ಸಾಕ್ಷ್ಯಚಿತ್ರದ ಶೀರ್ಷಿಕೆ ಟೀಸರ್​ ಅನಾವರಣ ಮಾಡಲಾಗಿದೆ.

ಗಂಧದ ಗುಡಿ ಚರಿತ್ರೆಯನ್ನು ಮರುಕಳಿಸುವಂತಿದೆ ಈ ಗಂಧದ ಗುಡಿ ಟೀಸರ್‌ ಕರ್ನಾಟಕ ಅರಣ್ಯ ಸಂಪತ್ತಿನ ಮಾಹಿತಿಯನ್ನು ಮತ್ತು ಪ್ರಕೃತಿ ಸೌಂದರ್ಯದ ಬಗ್ಗೆ ಇರುವ ವಿಶೇಷ ಕಾಳಜಿಯ ಡಾಕ್ಯುಮೆಂಟರಿ ಇದಾಗಿದೆ. ಡಾ.ರಾಜ್​ಕುಮಾರ್​ ಹಾಗೂ ಶಿವರಾಜ್​​ಕುಮಾರ್​ ಅವರು ಕೂಡ ಗಂಧದಗುಡಿ ಹೆಸರಿನಲ್ಲಿ ಸಿನಿಮಾ ಮಾಡಿದ್ದರು. ಅಣ್ಣಾವ್ರ ಗಂಧದಗುಡಿ ಸಿನಿಮಾ ದಾಖಲೆ ಸೃಷ್ಟಿಸಿತ್ತು. ಶಿವಣ್ಣ ಅವರ ಗಂಧದ ಗುಡಿ ಸಾಕಷ್ಟು ಹೆಸರು ಮಾಡಿತ್ತು. ಇದೀಗ ಅದೇ ಹೆಸರಿನಲ್ಲಿ ಅಪ್ಪು ಅವರ ಡಾಕ್ಯುಮೆಂಟರಿ ಚಿತ್ರ ಸಿದ್ಧವಾಗಿದೆ ಸಿನಿಮಾದಲ್ಲಿ ಪ್ರಾಣಿ, ಪರಿಸರ ಸಂರಕ್ಷಣೆಯ ಕುರಿತಾಗಿ ಸಂದೇಶವನ್ನು ಸಾರುವ ಸಿನಿಮಾವನ್ನು ಮಾಡಿದ್ದರು. ಇದೀಗ ತಂದೆ ಮತ್ತು ಅಣ್ಣನ ಹಾದಿಯಲ್ಲೇ ಅಪ್ಪು ಕೂಡಾ ಇದೇ ರೀತಿಯ ಪ್ರಯೋಗವನ್ನು ಮಾಡಲು ಮುಂದಾಗಿದ್ದಾರೆ. ಟೀಸರ್‌ ನೋಡಿದ ಅಭಿಮಾನಿಗಳು ಸಖತ್‌ ಖುಷಿಯಾಗಿ ಮೆಚ್ಚುಗೆ ಸೂಚಿಸುತ್ತಿದ್ದಾರೆ.

PRK ಆಡಿಯೋ ಯೂಟ್ಯೂಬ್ ಚಾನೆಲ್‍ನಲ್ಲಿ ಇಂದು ಬೆಳಗ್ಗೆ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ಪ್ರಸಿದ್ಧ ಅರಣ್ಯಗಳನ್ನೆಲ್ಲಾ ಅಪ್ಪು ಸುತ್ತಿದ್ರು. ಕರ್ನಾಟಕದ ಸೌಂದರ್ಯವನ್ನು ಈ ಡಾಕ್ಯುಮೆಂಟರಿಯಲ್ಲಿ ತೋರಿಸಲಾಗಿದೆ. ಹೀಗಾಗಿ ಇದಕ್ಕೆ ಗಂಧದ ಗುಡಿ ಎಂದು ಹೆಸರಿಡಲಾಗಿದೆ. 1 ನಿಮಿಷ 20 ಸೆಕೆಂಡ್‌ ಇರುವ ಈ ಟೀಸರ್‌ ರೋಮಾಂಚನಕಾರಿಯಾಗಿದೆ. 5 ದಶಕಗಳ ನಂತರ ಮತ್ತೆ ಗಂಧದಗುಡಿ ಅಭಿಮಾನಿಗಳ ಎದುರು ಬರಲಿದೆ ಎನ್ನುವುದು ಸಂತೋಷದ ವಿಚಾರವಾಗಿದೆ.

 

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

16 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

17 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

18 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

18 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

18 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

18 hours ago