Featured

ಅಪ್ಪ-ಮಕ್ಕಳು ಕಾಂಗ್ರೆಸ್​​ ಹೆಸರಿಲ್ಲದಂತೆ ಮಾಡ್ತಾರೆ ಎಂದು ಭವಿಷ್ಯ ನುಡಿದಿದ್ದ ಯಡಿಯೂರಪ್ಪ ವಿಡಿಯೋ ವೈರಲ್ -Vishwanews24

ಬೆಂಗಳೂರು: 2018ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರದ ಗದ್ದುಗೆ ಹಿಡಿಯಲು ವಿಫಲವಾಯಿತು. ಕಾಂಗ್ರೆಸ್-ಜೆಡಿಎಸ್ ಮೈತ್ರಿಯೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಬಳಿಕ ನಡೆದ ವಿಧಾನಸಭಾ ಅಧಿವೇಶನದಲ್ಲಿ ಬಿ.ಎಸ್. ಯಡಿಯೂರಪ್ಪ ನುಡಿದಿದ್ದ ಭವಿಷ್ಯ ಇಂದು ನಿಜವಾಗಿದೆ.

ನಾನು ಸದನದಲ್ಲಿ ಹೇಳಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 40 ವರ್ಷದ ರಾಜಕಾರಣದ ಅನುಭವದ ಮೇಲೆ ನಾನು ಆ ಮಾತನ್ನು ಹೇಳಿದ್ದೆ. ಸರ್ಕಾರದ ಅಳಿವು ಉಳಿವಿನ ಬಗ್ಗೆ ನಾನು ಈಗ ಏನನ್ನು ಹೇಳುವುದಿಲ್ಲ. ರಾಷ್ಟ್ರೀಯ ನಾಯಕರ ಜತೆ ಸಂಪರ್ಕಿಸಿ ಮುಂದೆ ಏನು ಮಾಡಬೇಕು ಎನ್ನುವುದರ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ನಿನ್ನೆ ಹೊರಬಿದ್ದ ಲೋಕಸಭಾ ಚುನಾವಣೆ 2019ರ ಫಲಿತಾಂಶದಲ್ಲಿ ಬೆಂಗಳೂರು ಗ್ರಾಮಾಂತರ ಹೊರತು ಪಡಿಸಿ ರಾಜ್ಯದ ಇನ್ನಾವ ಭಾಗದಲ್ಲೂ ಕಾಂಗ್ರೆಸ್​ಗೆ ಸಾಧ್ಯವಾಗಿಲ್ಲ. ರಾಜಕೀಯ ಪ್ರವೇಶಿಸಿದ ದಿನದಿಂದ ಇಂದಿನವರೆಗೂ ಒಂದೇ ಒಂದು ಸೋಲನ್ನೂ ಕಾಣದೆ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿದ್ದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೂ ಕೂಡ ಈ ಬಾರಿ ಸೋತಿದ್ದಾರೆ.  ಯಡಿಯೂರಪ್ಪ ನುಡಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಹೆಸರಿಲ್ಲದಂತಾಗಿದೆ. ಇದೀಗ ಯಡಿಯೂರಪ್ಪ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

ವರ್ಷದ ಹಿಂದೆ ವಿಧಾನಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮಾತನಾಡುತ್ತ, ಕೇಳಿ ಶಿವಕುಮಾರ್ ಅವರೇ, ನಿಮ್ಮನ್ನ ಇನ್ನು ಕೆಲವೇ ತಿಂಗಳುಗಳಲ್ಲಿ ಕಾಂಗ್ರೆಸ್ ಅನ್ನೋ ಹೆಸರನ್ನ ಇಲ್ಲದಂತೆ ಅಪ್ಪ-ಮಕ್ಕಳು ಸೇರಿ ಮಾಡದಿದ್ದರೆ, ನನ್ನ ಹೆಸರನ್ನು ಯಡಿಯೂರಪ್ಪ ಎಂದು ನೀವು ಕರೆಯಬೇಡಿ” ಎಂದಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago